ಮುಂದಿನವಾರ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಪಕ್ಷಾಧ್ಯಕ್ಷರ ಆಯ್ಕೆ

ನವದೆಹಲಿ, ಜುಲೈ 12: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಕುತೂಹಲ ಕೆರಳಿಸಿತ್ತು. ಈ ಕುತೂಹಲಕ್ಕೆ ಮುಂದಿನ ವಾರ ತೆರೆ ಬೀಳಲಿದೆ.

ಮುಂದಿನ ವಾರ ಸಭೆ ಸೇರಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯರು ಪಕ್ಷಕ್ಕೆ ಹಂಗಾಮಿ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಪ್ರದರ್ಶನದ ನೈತಿಕ ಹೊಣೆ ಹೊತ್ತು ರಾಹುಲ್ ಗಾಮಧಿ ಅವರು ಕಳೆದ ವಾರ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದರು. ಆದಷ್ಟು ಬೇಗ ಪರ್ಯಾಯ ಅಧ್ಯಕ್ಷರನ್ನು ಹುಡುಕಿ ಎಂದೂ ಸೂಚನೆ ನೀಡಿದ್ದರು.

ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಹುದ್ದೆಯಿಂದ ಕೆಳಗಿಳಿಯುವ ತೀರ್ಮಾನಕ್ಕೆ ಬಂದಿದ್ದ ರಾಹುಲ್ ಗಾಂಧಿ ಅವರನ್ನು ಪಕ್ಷದ ಹಿರಿಯರು ತಡೆದಿದ್ದರು. ಅವರ ಮನವೊಲಿಸುವ ಪ್ರಯತ್ನ ಕಳೆದ ವಾರದವರೆಗೂ ನಡೆದಿತ್ತು. ಆದರೆ ಪಟ್ಟು ಬಿಡದ ರಾಹುಲ್ ಗಾಂಧಿ, ಕಳೆದ ವಾರ ಅಧಿಕೃತವಾಗಿ ರಾಜೀನಾಮೆ ಘೋಷಿಸಿರುವುದರಿಂದ ಇದೀಗ ಅಧ್ಯಕ್ಷರ ಆಯ್ಕೆ ಅನಿವಾರ್ಯವಾಗಿದೆ.

CWC likely to choose new interim Congress chief next week

ಕರ್ನಾಟಕದ ರಾಜಕೀಯ ಬೆಳವಣಿಗೆ, ಗೋವಾದಲ್ಲಿ ಹತ್ತು ಕಾಂಗ್ರೆಸ್ ಶಾಸಕರ ರಾಜೀನಾಮೆ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಸಮಸ್ಯೆ ಎದುರಿಸುತ್ತಿದ್ದು, ಹೊಸ ಅಧ್ಯಕ್ಷರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಸವಾಲು ಎದುರಾಗಲಿದೆ.

ಹಂಗಾಮಿ ಅಧ್ಯಕ್ಷರಾಗುವಂತೆ ಇತ್ತೀಚೆಗೆ ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಅವರಿಗೆ ಮಾಡಿದ್ದ ಮನವಿಯನ್ನು ಅವರು ನಯವಾಗಿ ತಿರಸ್ಕರಿವಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನೇ ಪಕ್ಷಾಧ್ಯಕ್ಷರನ್ನಾಗಿ ಮಾಡಬೇಕು ಎಂಬ ಮಾತೂ ಕೇಳಿಬರುತ್ತಿದ್ದು, ಗಾಂಧಿ ಕುಟುಂಬದ ಹೊರತಾಗಿ ಬೇರೊಬ್ಬರು ಈ ಸ್ಥಾನ ಅಲಂಕರಿಸಿದರೆ ಪಕ್ಷದ ವರ್ಚಸ್ಸು ಕಡಿಮೆಯಾಗುತ್ತದೆ ಎಂಬುದು ಕಾಂಗ್ರೆಸ್ಸಿಗರ ಭಾವನೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+