ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಕೊರೊನಾದ ಮೂರನೇ ಅಲೆ: ಬರೋಬ್ಬರಿ 6725 ಪ್ರಕರಣಗಳು ಪತ್ತೆ

|
Google Oneindia Kannada News

ನವದೆಹಲಿ, ನವೆಂಬರ್ 03: ದೆಹಲಿಯಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ಶುರುವಾಗಿದೆ.

ಕಳೆದ 24 ಗಂಟೆಗಳಲ್ಲಿ 6725 ಪ್ರಕರಣಗಳು ಪತ್ತೆಯಾಗಿವೆ. ಕಳೆದ ಒಂದು ವಾರದಿಂದ ನಿತ್ಯ 5 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಇದೀಗ ಮತ್ತೆ 6 ಸಾವಿರದ ಗಡಿ ದಾಟಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 38310 ಮಂದಿಗೆ ಕೊವಿಡ್-19 ಪಾಸಿಟಿವ್ಭಾರತದಲ್ಲಿ 24 ಗಂಟೆಗಳಲ್ಲಿ 38310 ಮಂದಿಗೆ ಕೊವಿಡ್-19 ಪಾಸಿಟಿವ್

ಅಕ್ಟೋಬರ್ 30 ರಂದು 5891 ಪ್ರಕರಣಗಳು ದಾಖಲಾಗಿದ್ದವು. ವಾರದ ಅಂತ್ಯದಲ್ಲಿ 4001 ಪ್ರಕರಣ ಪತ್ತೆಯಾಗಿತ್ತು. ಈ ಶನಿವಾರ 44623 ಪರೀಕ್ಷೆಗಳನ್ನು ಮಾಡಿಸಲಾಗಿದೆ. ಭಾನುವಾರ 36,665 ಪರೀಕ್ಷೆ ಮಾಡಿಸಲಾಗಿದೆ.

Daily Covid Cases In Delhi Cross 6,000

48 ಮಂದಿ ಸಾವನ್ನಪ್ಪಿದ್ದು, 3610 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4 ಲಕ್ಷದ ಗಡಿ ದಾಟಿದೆ.

ದೆಹಲಿಯಲ್ಲಿ ಚಳಿ ಗಾಳಿ ಆರಂಭವಾಗಿದೆ, ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ತಾಪಮಾಣ ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣದಲ್ಲಿ ಭಾರಿ ಇಳಿಕೆಯಾಗಿದೆ. ಪ್ರತಿನಿತ್ಯ 50 ಸಾವಿರದ ಗಡಿ ದಾಟುತ್ತಿದ್ದ ಸೋಂಕಿತ ಪ್ರಕರಣಗಳ ಸಂಖ್ಯೆಯು 38310ಕ್ಕೆ ಸೀಮಿತಗೊಂಡಿದೆ.

ಕಳೆದ 24 ಗಂಟೆಗಳಲ್ಲಿ 38310 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.ಕಳೆದೊಂದು ದಿನಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯೇ ಹೆಚ್ಚಾಗಿದೆ.

ಒಂದು ದಿನದಲ್ಲಿ 58,323 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 490 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

English summary
Delhi logged a record 6,725 fresh cases of coronavirus in the last 24 hours -- the highest daily tally since the outbreak reached the national capital. The city has been reporting more than 5,000 cases for most of the last week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X