ಇಂದಿನ ಭಾರತ ಬಂದ್ ಮುಂದೂಡಿದ ದಲಿತ ಸಂಘಟನೆಗಳು
Recommended Video

ನವದೆಹಲಿ, ಆಗಸ್ಟ್ 09: ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯ್ದೆಯಲ್ಲಿ ತಿದ್ದುಪಡಿ ತರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ಬಂದ್ ಅನ್ನು ಮುಂದೂಡಲಾಗಿದ್ದು, ಇಂದು ಕೆಲವೆಡೆ ಕೇವಲ ಪ್ರತಿಭಟನೆಗಳಷ್ಟೇ ನಡೆಯಲಿವೆ.
"ಎಸ್ಸಿ ಎಸ್ಟಿ ಕಾಯ್ದೆಗೆ ಸಂಬಂಧಿಸಿದಂತೆ ನಮ್ಮ ಬೇಡಿಕೆಗಳು ಸದ್ಯಕ್ಕೆ ಈಡೇರಿದ್ದು, ಅದಕ್ಕಾಗಿ ಬಂದ್ ಅನ್ನು ಮುಂದೂಡಿದ್ದೇವೆ. ಆದರೆ ನಮ್ಮ ಮತ್ತಷ್ಟು ಬೇಡಿಕೆಗಳು ಈಡೇರಬೇಕಿದೆ. ಅದಕ್ಕಾಗಿ ಮತ್ತೆ ಬಂದ್ ಮಾಡುತ್ತೇವೆ. ಆದರೆ ಅದಕ್ಕೆ ದಿನ ನಿಗದಿಯಾಗಿಲ್ಲ" ಎಂದು ಅಖಿಲ ಭಾರತ ಅಂಬೇಡ್ಕರ್ ಮಹಾಸಭಾ ಹೇಳಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನ ಸಾಮಾಜಿಕವಾಗಿ ಹಿಂದುಳಿದಿದ್ದು, ಅವರ ಮೇಲೆ ನಿರಂತರ ಹಿಂಸೆ ನಡೆಯುತ್ತಿದೆ ಎಂಬುದನ್ನು ಮನಗಂಡಿದ್ದ 1989ರ ಸರ್ಕಾರ ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆ 1989 ಅನ್ನು ಜಾರಿಗೆ ತಂದಿತ್ತು. ಇದರನ್ವಯ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಯಾವುದೇ ವ್ಯಕ್ತಿ ತಮ್ಮ ಮೇಲೆ ದೌರ್ಜನ್ಯವಾಗುತ್ತಿದೆ ಎಂದು ದೂರು ನೀಡಿದ್ದೇ ಆದಲ್ಲಿ, ಆರೋಪಿಯನ್ನು ಯಾವುದೇ ವಿಚಾರಣೆಯಿಲ್ಲದೆ ಬಂಧಿಸಲಾಗುತ್ತಿತ್ತು ಮತ್ತು ಆತನ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿತ್ತು.

ಆದರೆ ಇತ್ತೀಚಿನ ದಿನಗಳಲ್ಲಿ ಈ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದನ್ನು ಅರಿತ ಸುಪ್ರೀಂ ಕೋರ್ಟ್ ಈ ಕಾಯ್ದೆಯಲ್ಲಿ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಅಂತೆಯೇ ಮುಂಗಾರು ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆಯನ್ನು ಮಂಡಿಸಲಾಗಿದ್ದು ಅದಕ್ಕಾಗಿ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಆಗಸ್ಟ್ 9 ರಂದು ಬಂದ್ ಗೆ ಕರೆನೀಡಲಾಗಿತ್ತು.











Click it and Unblock the Notifications