ದೆಹಲಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ

Danish woman gangraped beaten robbed at Connaught Place in Delhi
ನವದೆಹಲಿ, ಜ.15: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ಮಂಗಳವಾರ ಸಂಜೆ 5 ಗಂಟೆಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿರುವುದಾಗಿ ವರದಿಯಾಗಿದೆ.
ಘಟನೆಯ ಬಳಿಕ ನೊಂದ ಮಹಿಳೆ ಬುಧವಾರ ಬೆಳಗ್ಗೆ ಸ್ವದೇಶಕ್ಕೆ ಮರಳಿರುವುದಾಗಿ ಮೂಲಗಳು ತಿಳಿಸಿವೆ. ಇದರಿಂದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ.

ಡೆನ್ಮಾರ್ಕ್‌ ಮೂಲದ 51ರ ಹರೆಯದ ಈ ಮಹಿಳೆ ಪ್ರವಾಸಕ್ಕೆಂದು ಭಾರತಕ್ಕೆ ಭೇಟಿ ನೀಡಿದ್ದರು. ಮಂಗಳವಾರ ಮ್ಯೂಸಿಯಂ ಒಂದಕ್ಕೆ ತೆರಳಿದ್ದರು. ಅಲ್ಲಿಂದ ಅವರು ತಂಗಿದ್ದ ಪಹಾರ್‌ ಗಂಜ್ ಹೋಟೆಲಿಗೆ ಹಿಂದಿರುಗುತ್ತಿದ್ದ ವೇಳೆ ದಾರಿ ತಿಳಿಯದೆ ಗೊಂದಲಕ್ಕೀಡಾಗಿದ್ದಾರೆ. ಈ ವೇಳೆ ಕೆಲವು ಯುವಕರು ಆಕೆಯನ್ನು ಅಡ್ಡಗಟ್ಟಿ, ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ, ಅವರ ಬಳಿಯಿದ್ದ ಐ ಪ್ಯಾಡ್ ಮತ್ತು ಯುರೋ ಹಣವನ್ನು ದೋಚಿದ್ದಾರೆ.

ಘಟನೆಯ ಬಳಿಕ ಹೋಟೆಲಿಗೆ ಮರಳಿದ ಬಾಧಿತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೇರೆಗೆ ಕನಾಟ್ ಪ್ಲೇಸ್ ಪಹಾರ್‌ ಗಂಜ್ ಪ್ರದೇಶದಲ್ಲಿ ರಾತ್ರಿ ವೇಳೆ ಅಡ್ಡಾಡಿದ್ದ 15 ಯುವಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ರಾಜಧಾನಿಯಲ್ಲಿ ಮಹಿಳೆಯ ಮೇಲೆ ನಡೆದ ಮೊದಲ ಲೈಂಗಿಕ ಕಿರುಕುಳ ಇದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+