• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಕಿಯಲ್ಲಿ ಬೆಂದ ಉನ್ನಾವೊ ರೇಪ್ ಸಂತ್ರಸ್ತೆ ಸ್ಥಿತಿ ಗಂಭೀರ

|

ನವದೆಹಲಿ, ಡಿಸೆಂಬರ್ 06: ಉತ್ತರಪ್ರದೇಶದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸ್ಥಿತಿ ಗಂಭೀರವಾಗಿದೆ. ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ನ್ಯಾಯಾಲಯಕ್ಕೆ ಹೋಗುವ ಹಾದಿಯಲ್ಲಿ ಆಕೆಯ ಮೇಲೆ ಆರೋಪಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿತ್ತು.

ತಕ್ಷಣವೇ ಆಕೆಯನ್ನು ಏರ್ ಲಿಫ್ಟ್ ಮಾಡಿ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ಸೇರಿಸಲಾಯಿತು. ಆಕೆ ದೇಹದ ಬಹುತೇಕ ಭಾಗ ಸುಟ್ಟಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ. ವೆಂಟಿಲೇಟರ್ ನಲ್ಲಿರುವ ಆಕೆ ಸ್ಥಿತಿ ಗಂಭೀರವಾಗಿದೆ ಎಂದು ಪ್ಲಾಸ್ಟಿಕ್ ಸರ್ಜರಿ, ಸುಟ್ಟಗಾಯಗಳ ಚಿಕಿತ್ಸಾ ತಜ್ಞ ಡಾ ಶಲಾಬ್ ಕುಮಾರ್ ಹೇಳಿದ್ದಾರೆ.

ಯೋಗಿ ಆಡಳಿತದಲ್ಲಿ ಅತ್ಯಾಚಾರಿಗಳ ದರ್ಬಾರ್: ಜಾಮೀನು ಪಡೆದ ದಿನವೇ ಸಂತ್ರಸ್ತೆಗೆ ಬೆಂಕಿ ಇಟ್ಟ ಆರೋಪಿಯೋಗಿ ಆಡಳಿತದಲ್ಲಿ ಅತ್ಯಾಚಾರಿಗಳ ದರ್ಬಾರ್: ಜಾಮೀನು ಪಡೆದ ದಿನವೇ ಸಂತ್ರಸ್ತೆಗೆ ಬೆಂಕಿ ಇಟ್ಟ ಆರೋಪಿ

ದೆಹಲಿ ಪೊಲೀಸರು ಗುರುವಾರದಂದು ಗ್ರೀನ್ ಕಾರಿಡಾರ್ ನಿರ್ಮಿಸಿ ಆಂಬ್ಯುಲೆನ್ಸ್ ಆದಷ್ಟು ಬೇಗ ವಿಮಾನ ನಿಲ್ದಾಣದಿಂದ ಆಸ್ಪತ್ರೆ ತಲುಪುವಂತೆ ನೋಡಿಕೊಂಡಿದ್ದರು.

ಆಸ್ಪತ್ರೆಯಲ್ಲಿ ವಿಶೇಷ ಐಸಿಯುವಿನಲ್ಲಿ ಪ್ರತಿಕ್ಷಣ ನಿಗಾವಹಿಸಿದ್ದು, ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡು ಬಂದಿಲ್ಲ ಎಂದು ಸಫ್ದರ್ ಜಂಗ್ ಆಸ್ಪತ್ರೆಯ ಮೆಡಿಕಲ್ ಸೂಪರ್ ಇಂಟೆಂಡೆಂಟ್ ಡಾ ಸುನೀಲ್ ಗುಪ್ತಾ ಹೇಳಿದರು.

ಉನ್ನಾವೊ ಬಳಿ ಗ್ರಾಮವೊಂದರಲ್ಲಿ 23 ರ ಯುವತಿಯ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಿ ಅದನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು. ಇದರ ಬಗ್ಗೆ ಯುವತಿಯು ಮಾರ್ಚ್‌ ನಲ್ಲಿಯೇ ದೂರು ದಾಖಲಿಸಿದ್ದರು. ಇಬ್ಬರ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದರು.

ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಬಿಚ್ಚಿಟ್ಟ ಆ ಕರಾಳ ದಿನದ ನೆನಪು...ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಬಿಚ್ಚಿಟ್ಟ ಆ ಕರಾಳ ದಿನದ ನೆನಪು...

ಯುವತಿಯು ಮಾರ್ಚ್‌ ತಿಂಗಳಿನಲ್ಲಿಯೇ ಇಬ್ಬರ ವಿರುದ್ಧ ದೂರು ದಾಖಲು ಮಾಡಿದ್ದರೂ ಸಹ ಪೊಲೀಸರು ಎಫ್‌ಐಆರ್ ದಾಖಲಿಸಿದ ಕೆಲವು ದಿನಗಳ ನಂತರ ಒಬ್ಬ ಆರೋಪಿಯನ್ನು ಮಾತ್ರವೇ ಬಂಧಿಸಿದ್ದರು. ಮತ್ತೊಬ್ಬನನ್ನು ಈ ವರೆಗೂ ಬಂಧಿಸಿಲ್ಲ. ಒಬ್ಬ ಆರೋಪಿಗೆ 10 ದಿನಗಳ ಹಿಂದೆ ಜಾಮೀನು ಸಿಕ್ಕಿದೆ.

ನ್ಯಾಯಾಲಯದಲ್ಲಿ ಸಾಕ್ಷಿ ಹೇಳಲು ಬರುವ ವೇಳೆಯಲ್ಲಿ ಇಬ್ಬರು ಆರೋಪಿಗಳು ಸೇರಿದಂತೆ ಐದು ಮಂದಿ ಆಕೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಆಕೆಯನ್ನು ಮೊದಲಿಗೆ ಲಕ್ನೋದ ಶ್ಯಾಮ ಪ್ರಸಾದ್ ಮುಖರ್ಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಕರೆತರಲಾಗಿದೆ.

English summary
The rape survivor from Unnao, who was airlifted to Delhi and admitted to the Safdarjung Hospital here, is extremely critical and on ventilator, doctors attending to her said on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X