ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

12 ವರ್ಷದೊಳಗಿನ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ

|
Google Oneindia Kannada News

ನವದೆಹಲಿ, ಏಪ್ರಿಲ್ 21: ಇಡಿ ದೇಶವೂ ತಲ್ಲಣಿಸುವಂತೆ ಮಾಡಿದ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಣಯವೊಂದನ್ನು ತೆಗೆದುಕೊಂಡಿದೆ.

12 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ವ್ಯಕ್ತಿಯನ್ನು ಗಲ್ಲಿಗೇರಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ಸೂಚಿಸಿದೆ.

Death penalty for rapists of children below 12 years


ಪೋಕ್ಸೋ(Protection of Children from Sexual Offences) ಕಾಯ್ದೆಯಲ್ಲಿ ತಿದ್ದುಪಡಿ ತರುವ ಮೂಲಕ ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ಇದೇ ವೇಳೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಿಗೆ ನೀಡುವ ಜೈಲುಶಿಕ್ಷೆಯನ್ನು 10 ರಿಂದ 20 ವರ್ಷಕ್ಕೆ ಏರಿಸುವ ತೀರ್ಮಾನವನ್ನೂ ಕೈಗೊಳ್ಳಲಾಗಿದೆ.

ಈ ವರ್ಷ ಜನವರಿಯಲ್ಲಿ ಜಮ್ಮು ಕಾಶ್ಮಿರದ ಕತುವಾದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

English summary
The Centre on Saturday approved the ordinance to award death sentence to the rapists of children below the age of 12. Following a meeting of the Union Cabinet here, the government cleared the amendment in the Protection of Children from Sexual Offences (POCSO) Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X