• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲು ಕಪಿಲ್ ಸಿಬಲ್ ಒತ್ತಾಯ

|

ನವದೆಹಲಿ, ಏಪ್ರಿಲ್ 18: ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ.

ದೇಶದಲ್ಲಿ ಚೇತರಿಕೆಗಿಂತ ವೇಗವಾಗಿ ಸೋಂಕು ಹರಡುತ್ತಿದೆ, ಜನರ ಸ್ಥಿತಿ ಚಿಮಾತಾಜನಕವಾಗಿದೆ, ಈ ಸಂದರ್ಭದಲ್ಲಿ ರಾಷ್ಟ್ರೀಯ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸಬೇಕಾದ ಅಗತ್ಯ ಹೆಚ್ಚಿದೆ ಎಂದಿದ್ದಾರೆ.

ಭಾರತದಲ್ಲಿ ಎರಡೂವರೆ ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರುಭಾರತದಲ್ಲಿ ಎರಡೂವರೆ ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು

ಇಷ್ಟೇ ಅಲ್ಲದೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸುವುದು ಒಳ್ಳೆಯದಲ್ಲ ಕೂಡಲೇ ಈ ಮೆರವಣಿಗೆಗಳನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕಿತರು ಎರಡು ಲಕ್ಷ ಗಡಿ ದಾಟಿದ್ದಾರೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 2,61,500 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಹಾಗೆಯೇ 1501 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದುವರೆಗೆ 1,77,150 ಮಂದಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ, ಒಟ್ಟು 1,47,88,109 ಪ್ರಕರಣಗಳಿವೆ.

18,01,316 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ 1,28,09,643 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕಳೆದ 24 ಗಂಟೆಯಲ್ಲಿ 1,38,423 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದಬ ಮಾಹಿತಿ ಲಭ್ಯವಾಗಿದೆ. ಇದುವರೆಗೂ ದೇಶದಲ್ಲಿ 12,26,22,590 ಮಂದಿಗೆ ಕೊರೊನಾ ಲಸಿಕೆ ವಿತರಿಸಲಾಗಿದೆ.

English summary
Amid a steep rise in coronavirus cases, senior Congress leader Kapil Sibal on Sunday urged Prime Minister Narendra Modi to declare a national health emergency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X