ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ: 700 ಎಕರೆ ಜಮೀನು ಹಸ್ತಾಂತರಕ್ಕೆ ರಾಜನಾಥ್ ಸಿಂಗ್ ಭರವಸೆ

|
Google Oneindia Kannada News

ನವದೆಹಲಿ, ಮೇ 11: ಬೆಳಗಾವಿಯಲ್ಲಿ 700 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದೆ. ಅದು ರಾಜ್ಯ ಸರ್ಕಾರದ ಜಮೀನು. ಈ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ತಿಳಿಸಿದ್ದಾರೆ.

ಅವರು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಲಾಯಿತು ಎಂದರು.

Defence minister assured transfer of 700 acres of land in Belagavi: CM Bommai

ಬೆಳಗಾವಿಯಲ್ಲಿ ಐ.ಟಿ ಪಾರ್ಕ್ ಮಾಡುವ ಉದ್ದೇಶವಿದೆ. ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗಿದೆ. ಅದಕ್ಕಾಗಿ ಈ ಜಮೀನನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಂಗ್ ಅವರು, ಸಂಬಂಧಪಟ್ಟವರ ಜತೆ ಮಾತನಾಡಿ ವರದಿ ತರಿಸಿಕೊಂಡು ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.

Defence minister assured transfer of 700 acres of land in Belagavi: CM Bommai

ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ ಬಗ್ಗೆ ಅವಧಿ ವಿಸ್ತರಣೆಗೆ ಕೋರಲಾಗಿದ್ದ ಹಿನ್ನೆಲೆಯಲ್ಲಿ ವಿಸ್ತರಣೆ ನೀಡಿದ್ದಾರೆ. ಶಾಲೆಯ ಉದ್ಘಾಟನೆಗೆ ಕೇಂದ್ರ ರಕ್ಷಣಾ ಸಚಿವರನ್ನು ಆಹ್ವಾನಿಸಲಾಯಿತು ಎಂದರು.

English summary
About 700 acres of grassland in Belagavi is under the control of the Defence ministry. It actually belongs to the State government. We have appealed to transfer the land to the State government. Union Defence minister Rajnath Singh has responded positively to the request, Chief Minister Basavaraj Bommai said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X