• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಗೆ ಕೋವಿಡ್-19 ಪಾಸಿಟಿವ್.!

|

ನವದೆಹಲಿ, ಜೂನ್ 4: ಭಾರತದ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಗೆ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರನ್ನ ಹೋಮ್ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಜಯ್ ಕುಮಾರ್ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ವೈರಸ್ ಭೀತಿ ನಡುವೆ ವಿದೇಶಿಗರಿಗೆ ಮುಕ್ತ ಪ್ರವೇಶ!

ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ರವರ ಕಾಂಟ್ಯಾಕ್ಟ್ ಟ್ರೇಸಿಂಗ್ ನಡೆಯುತ್ತಿದ್ದು, ಕಮ್ಮಿ ಅಂದರೂ 35 ಅಧಿಕಾರಿಗಳನ್ನ ಅವರು ಸಚಿವಾಲಯದಲ್ಲಿ ಭೇಟಿ ಮಾಡಿದ್ದಾರೆ. ಹೀಗಾಗಿ, ಸಚಿವಾಲಯದ ಸೌತ್ ಬ್ಲಾಕ್ ನಲ್ಲಿರುವ ಎಲ್ಲಾ ಅಧಿಕಾರಿಗಳನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಬುಧವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಚಿವಾಲಯದ ಕಛೇರಿಗೆ ಭೇಟಿ ಕೊಡಲಿಲ್ಲ.

ಅಂದ್ಹಾಗೆ, ಭಾರತದಲ್ಲಿ ಸದ್ಯ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 2,16,824 ಕ್ಕೆ ಏರಿದೆ. ಇಲ್ಲಿಯವರೆಗೂ 1,04,071 ಜನ ಕೋವಿಡ್-19 ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದರೆ, 6,088 ಮಂದಿ ಜೀವ ಕಳೆದುಕೊಂಡಿದ್ದಾರೆ.

English summary
Defence Secretary Ajay Kumar tests Covid-19 Positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X