ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ಕೊರೊನಾ ಸೋಂಕು; ವಿಮಾನಗಳ ಸ್ಥಗಿತಕ್ಕೆ ಮನವಿ

|
Google Oneindia Kannada News

ನವದೆಹಲಿ, ಡಿಸೆಂಬರ್ 21: ಕೊರೊನಾ ಸೋಂಕಿಗೆ ಲಸಿಕೆ ಅಭಿವೃದ್ಧಿಗೊಳ್ಳುತ್ತಿದ್ದು, ಸಾಮೂಹಿಕ ಲಸಿಕಾ ಕಾರ್ಯಕ್ರಮಕ್ಕೆ ಇಡೀ ವಿಶ್ವದಲ್ಲಿ ತಯಾರಿ ನಡೆಯುತ್ತಿದೆ. ಇದೀಗ ಬ್ರಿಟನ್ ನಲ್ಲಿ ಹೊಸ ನಮೂನೆಯ ಕೊರೊನಾ ವೈರಸ್ ಪತ್ತೆಯಾಗಿದ್ದು, ಮತ್ತೆ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ತಾತ್ಕಾಲಿಕವಾಗಿ ಬ್ರಿಟನ್ ನಿಂದ ಭಾರತಕ್ಕೆ ಬರುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಅತಿ ವೇಗವಾಗಿ ಹರಡಬಲ್ಲ ಈ ಹೊಸ ವಿಧದ ಸೋಂಕಿನ ಕುರಿತ ಚರ್ಚೆಗೆ ಕೇಂದ್ರ ಆರೋಗ್ಯ ಸಚಿವಾಲಯವು ಜಂಟಿ ಮೇಲ್ವಿಚಾರಣಾ ಸಮಿತಿ ತುರ್ತು ಸಭೆ ಕರೆದಿದೆ. ಆದರೆ ಈ ಸೋಂಕಿನ ಕುರಿತು ಭಾರತೀಯರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಬ್ರಿಟನ್‌ನಲ್ಲಿ ಹೊಸ ಕೊರೊನಾ ಸೋಂಕು ಪತ್ತೆ: ತುರ್ತು ಸಭೆ ಕರೆದ ಆರೋಗ್ಯ ಸಚಿವಾಲಯಬ್ರಿಟನ್‌ನಲ್ಲಿ ಹೊಸ ಕೊರೊನಾ ಸೋಂಕು ಪತ್ತೆ: ತುರ್ತು ಸಭೆ ಕರೆದ ಆರೋಗ್ಯ ಸಚಿವಾಲಯ

"ಬ್ರಿಟನ್ ನಲ್ಲಿ ಪತ್ತೆಯಾಗಿರುವ ಈ ಹೊಸ ವಿಧದ ವೈರಸ್ ಕುರಿತು ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸಿದೆ. ಯಾರೂ ಭಯ ಪಡುವ ಅಗತ್ಯವಿಲ್ಲ. ಸರ್ಕಾರ ಮುಂಜಾಗ್ರತೆಯಿಂದ ಕೆಲಸ ಮಾಡುತ್ತಿದೆ. ಕಳೆದ ಒಂದು ವರ್ಷದಲ್ಲಿ, ನೀವೇ ಕಂಡಂತೆ ಜನರ ರಕ್ಷಣೆಗೆ ಸಂಬಂಧಿಸಿದಂತೆ ಸರ್ಕಾರ ಸಾಕಷ್ಟು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಆತಂಕ ಪಡುವುದರಲ್ಲಿ ಯಾವುದೇ ಅರ್ಥವಿಲ್ಲ" ಎಂದು ತಿಳಿಸಿದ್ದಾರೆ.

 Dehi CM Kejriwal Asks Centre To Ban All Flights from UK Immediately

ಈ ಹೊಸ ವೈರಸ್ ಪ್ರಸ್ತುತ ವೈರಸ್ ಗಿಂತ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಪರಿಸ್ಥಿತಿ ಕೈ ಮೀರಿದೆ ಎಂದು ಬ್ರಿಟನ್ ಸರ್ಕಾರವೇ ಹೇಳಿದೆ. ಹೀಗಾಗಿ ಬ್ರಿಟನ್‌ನಿಂದ ಬರುವ ಎಲ್ಲಾ ವಿಮಾನಗಳನ್ನು ಯೂರೋಪ್ ಹಲವು ರಾಷ್ಟ್ರಗಳು ರದ್ದುಪಡಿಸಿವೆ.

ಈ ಹಿನ್ನೆಲೆಯಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ತಕ್ಷಣವೇ ಬ್ರಿಟನ್ ನಿಂದ ಬರುವ ವಿಮಾನಗಳನ್ನು ಸ್ಥಗಿತಗೊಳಿಸಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿದ್ದು, ತಾತ್ಕಾಲಿಕವಾಗಿ ಬ್ರಿಟನ್ ನಿಂದ ಬರುವ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. "ಬ್ರಿಟನ್ ನಿಂದ ದೇಶದಲ್ಲಿ ಮತ್ತೆ ಕೊರೊನಾ ಬಿಕ್ಕಟ್ಟು ಸೃಷ್ಟಿಯಾಗಬಹುದು. ಈ ಸೋಂಕು ಮತ್ತಷ್ಟು ವೇಗವಾಗಿ ಹರಡಬಲ್ಲದ್ದಾಗಿರುವುದರಿಂದ ಬ್ರಿಟನ್ ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳಿಗೆ ತಡೆಯೊಡ್ಡಬೇಕು" ಎಂದು ಕೇಜ್ರಿವಾಲ್ ಮನವಿ ಮಾಡಿದ್ದರು.

English summary
Delhi Chief Minister Arvind Kejriwal urged the Centre to ban all flights from UK "immediately" to contain the spread of the virus in the country
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X