ದೆಹಲಿಯಲ್ಲಿ 5 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರ

Subscribe to Oneindia Kannada

ನವದೆಹಲಿ, ಸೆಪ್ಟೆಂಬರ್ 10: ಗುರುಗ್ರಾಮದ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ವಿದ್ಯಾರ್ಥಿಯೊಬ್ಬ ಲೈಂಗಿಕ ಕೃತ್ಯಕ್ಕೆ ಸಹಕರಿಸಿಲ್ಲ ಎಂಬ ಕಾರಣಕ್ಕೆ ಕೊಲೆಯಾದ ಘಟನೆ ಇನ್ನೂ ಮಾಸಿಲ್ಲ. ಇದರ ಮಧ್ಯೆ ದೆಹಲಿಯ ಟಾಗೋರ್ ಪಬ್ಲಿಕ್ ಸ್ಕೂಲ್ ನಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ.

ಬೆಳಗಾವಿ: ಹಸುಳೆಯನ್ನು ರೇಪ್ ಮಾಡಿ ಜೀವಂತ ಸಮಾಧಿ ಮಾಡಲೆತ್ನಿಸಿದ ಕಾಮುಕ

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪಿಯೋನ್ ನನ್ನು ಬಂಧಿಸಲಾಗಿದ್ದು ಪೊಸ್ಕೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

 Delhi: 5 year old student raped, peon arrested

ಶನಿವಾರ ಶಾಲೆ ಬಿಟ್ಟ ಮೇಲೆ ಮನೆಗೆ ಹೋದ ಬಾಲಕಿ ಖಾಸಗಿ ಅಂಗ ನೋಯುತ್ತಿದೆ ಎಂದು ತಾಯಿಗೆ ಹೇಳಿದ್ದಳು. ನಂತರ ಆಸ್ಪತ್ರೆಗೆ ದಾಖಲಿಸಿದಾಗ ಅತ್ಯಾಚಾರವಾಗಿರುವುದು ಬೆಳಕಿಗೆ ಬಂದಿದೆ. ಇದೀಗ ಬಾಲಕಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಬಾಲಕಿ ಸ್ಥಿತಿ ಗಂಭೀರವಾಗಿದೆ.

ಶಾಲೆಯೊಳಗೆ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಪ್ರಾಥಮಿಕ ತನಿಖೆಗಳು ಹೇಳಿವೆ. ಇನ್ನು ಪ್ರಕರಣದ ನ್ಯಾಯಾಂಗ ತನಿಖೆಗೆ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರಕಾರ ಆದೇಶ ನೀಡಿದ್ದು, ಮೂರು ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A five-year-old girl student was raped inside the premises of Tagore Public School in Gandhi Nagar, Delhi.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ