• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಏರ್‌ಪೋರ್ಟ್‌ನಲ್ಲಿ ಶೀಘ್ರ ಕೊವಿಡ್ 19 ಪರೀಕ್ಷಾ ಕೇಂದ್ರ

|
Google Oneindia Kannada News

ನವದೆಹಲಿ, ಆಗಸ್ಟ್ 18: ದೆಹಲಿ ಏರ್‌ಪೋರ್ಟ್‌ನಲ್ಲಿ ಕೊವಿಡ್ 19 ಪರೀಕ್ಷಾ ಕೇಂದ್ರ ಶೀಘ್ರದಲ್ಲಿ ಪ್ರಾರಂಭಿಸಲಾಗುತ್ತದೆ.

   IPL 2020 : ಯಾರ ಕೈ ಸೇರುತ್ತೆ IPL ಟೈಟಲ್ ಪ್ರಾಯೋಜಕತ್ವ | Oneindia Kannada

   ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಅಲ್ಲಿಯೇ ಕೊವಿಡ್ ಟೆಸ್ಟ್‌ ಮಾಡಿಸಿಕೊಳ್ಳಬೇಕು, ನೆಗೆಟಿವ್ ಬಂದವರು ಏಳು ದಿನಗಳ ಕ್ವಾರಂಟೈನ್‌ನಿಂದ ಮುಕ್ತಿ ಪಡೆಯುತ್ತಾರೆ.

   ಭಾರತದಲ್ಲಿ 24 ಗಂಟೆಗಳಲ್ಲಿ ದಾಖಲೆಯ ಸೋಂಕಿತರು ಗುಣಮುಖಭಾರತದಲ್ಲಿ 24 ಗಂಟೆಗಳಲ್ಲಿ ದಾಖಲೆಯ ಸೋಂಕಿತರು ಗುಣಮುಖ

   ಕೇವಲ ಏಳು ಗಂಟೆಯಲ್ಲಿ ಪರೀಕ್ಷಾ ವರದಿ ಕೈ ಸೇರಲಿದ್ದು, ಅಲ್ಲಿಯವರೆಗೆ ಪ್ರಯಾಣಿಕರು ವಿಮಾನ ನಿಲ್ದಾಣದ ಆಸುಪಾಸಿನಲ್ಲೇ ಇರಬೇಕಾಗುತ್ತದೆ. ಅಂದೇ ವರದಿ ಲಭ್ಯವಾಗುವುದರಿಂದ ಸೋಂಕು ಮತ್ತೊಬ್ಬರಿಗೆ ಹರಡುವುದನ್ನು ತಡೆಗಟ್ಟಬಹುದಾಗಿದೆ.

   ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯದೆ ಭುವನೇಶ್ವರ್ 600 ಮಂದಿ ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದಾರೆ. ಜುಲೈ ಮಧ್ಯದಲ್ಲಿ 1035 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದರು. 608 ಮಂದಿ ಗುಣಮುಖರಾಗಿದ್ದಾರೆ.

   ಕಳೆದ 24 ಗಂಟೆಯಲ್ಲಿ 876 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿತ ಪ್ರಕರಣ ಇಂದು 50 ಸಾವಿರದ ಗಡಿ ದಾಟಿದೆ.

   ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 27 ಲಕ್ಷದ ಗಡಿ ದಾಟಿದೆ. ಪ್ರತಿನಿತ್ಯ ಸೋಂಕಿತ ಪ್ರಕರಣಗಳು 50 ಸಾವಿರಕ್ಕಿಂತ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲೇ 55079 ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ.

   ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿನಿಂದ 876 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 51797ಕ್ಕೆ ಏರಿಕೆಯಾಗಿದೆ.

   ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು ಈಗಾಗಲೇ 2702743ಕ್ಕೆ ಏರಿಕೆಯಾಗಿದೆ. ಈ ಪೈಕಿ 1977780 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಒಟ್ಟು 673166 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

   English summary
   International passenger can get themselves tested on arrival if and when a Covid-19 testing facility comes up at the Delhi airport.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X