ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ 30 ಮಂದಿ ನಾಮಪತ್ರ ವಾಪಸ್, ಕಣದಲ್ಲಿ ಉಳಿದವರೆಷ್ಟು?

|
Google Oneindia Kannada News

ನವದೆಹಲಿ, ಜನವರಿ.24: ದೆಹಲಿ ವಿಧಾನಸಭಾ ಚುನಾವಣೆ 2020ರ ನಾಮಪತ್ರ ವಾಪಸ್ ಪಡೆಯುವ ದಿನಾಂಕ ಮುಕ್ತಾಯಗೊಂಡಿದೆ. ಶುಕ್ರವಾರ 30 ಮಂದಿ ತಾವು ಸಲ್ಲಿಸಿದ್ದ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಈ ಬಾರಿ ನವದೆಹಲಿ ವಿಧಾನಸಭಾ ಚುನಾವಣೆಯ 70 ಕ್ಷೇತ್ರಗಳಲ್ಲಿ ಒಟ್ಟು 668 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಜನವರಿ.06ರಂದು ದೆಹಲಿ ವಿಧಾನಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅಧಿಸೂಚನೆ ಹೊರಡಿಸಿದ್ದರು.

ಚುನಾವಣಾ ಆಯೋಗದ ಅಂಕಿ-ಅಂಶಗಳ ಪ್ರಕಾರ ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 1 ಕೋಟಿ 46 ಲಕ್ಷ 92 ಸಾವಿರದ 136 ಮತದಾರರಿದ್ದು, ಮತದಾನಕ್ಕಾಗಿ 13 ಸಾವಿರದ 750 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಇನ್ನು, ಭದ್ರತೆಗಾಗಿ 90 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ.

5 ವರ್ಷಗಳ ಹಿಂದೆ ಸಿಎಂ ಕೇಜ್ರಿವಾಲ್ ಏನ್ ಹೇಳಿದ್ದರು ಗೊತ್ತಾ?5 ವರ್ಷಗಳ ಹಿಂದೆ ಸಿಎಂ ಕೇಜ್ರಿವಾಲ್ ಏನ್ ಹೇಳಿದ್ದರು ಗೊತ್ತಾ?

ಫೆಬ್ರವರಿ.08ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಫೆಬ್ರವರಿ.11ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಫೆಬ್ರವರಿ.22ರಂದು ಪ್ರಸಕ್ತ ಸರ್ಕಾರದ ಅವಧಿ ಮುಕ್ತಾಯಗೊಳ್ಳಲಿದ್ದು, ಅಷ್ಟರೊಳಗೆ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

 Delhi Assembly Elections 2020: 30 Peoples Withdrawal Nomination

ಕಳೆದ ಬಾರಿ 67 ಸ್ಥಾನ ಗೆದ್ದಿದ್ದ ಆಪ್:

ಕಳೆದ 2015ರಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಜಯಭೇರಿ ಬಾರಿಸಿತ್ತು. 70 ವಿಧಾನಸಭಾ ಕ್ಷೇತ್ರಗಳ ಪೈಕಿ 67 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು. ಭಾರತೀಯ ಜನತಾ ಪಕ್ಷವು ಕೇವಲ ಮೂರು ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ಪಕ್ಷವು ಶೂನ್ಯಸಾಧನೆ ಮಾಡಿತ್ತು.

English summary
Delhi Assembly Elections 2020: 30 Peoples Withdrawal Nomination, 668 Candidates In Race.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X