ದೆಹಲಿ ವಿಧಾನಸಭೆ ಚುನಾವಣೆ; ಎಎಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ, ಜನವರಿ 14 : ದೆಹಲಿ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನ್ಯೂ ಡೆಲ್ಲಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಮಂಗಳವಾರ ಆಮ್ ಆದ್ಮಿ ಪಕ್ಷ ದೆಹಲಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಫೆಬ್ರವರಿ 8ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 11ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Delhi Assembly Elections 2020 AAP Releases Candidates List

ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿವೆ. ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪ್ರತಾಪ್ ಗಂಜ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಒಟ್ಟು 8 ಮಹಿಳೆಯರಿಗೆ ಟಿಕೆಟ್ ನೀಡಲಾಗಿದ್ದು, 45 ಹಾಲಿ ಶಾಸಕರು ಟಿಕೆಟ್ ಪಡೆದಿದ್ದಾರೆ.

ಅಭ್ಯರ್ಥಿಗಳ ಪಟ್ಟಿ

ದೆಹಲಿಯಲ್ಲಿ ಪ್ರಸ್ತುತ ಆಮ್ ಆದ್ಮಿ ಪಕ್ಷದ ಸರ್ಕಾರವೇ ಇದೆ. ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಬೇಕು ಎಂದು ಬಿಜೆಪಿ ತಂತ್ರ ರೂಪಿಸುತ್ತಿದೆ. ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಮೊದಲು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವುದು ಎಎಪಿ.

ಮತ್ತೊಂದು ಕಡೆ ಕಾಂಗ್ರೆಸ್ ಸಹ ದೆಹಲಿ ಗದ್ದುಗೆ ಮೇಲೆ ಕಣ್ಣಿಟ್ಟಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಹಿರಿಯ ನಾಯಕರು ದೆಹಲಿ ಚುನಾವಣೆ ಕಣಕ್ಕಿಳಿಯಬೇಕು. ಲೋಕಸಭಾ ಚುನಾವಣೆಯಲ್ಲಿ ಸೋತವರು ಸಹ ಸ್ಪರ್ಧಿಸಬೇಕು ಎಂದು ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+