ದೆಹಲಿ ಚುನಾವಣೆ: ಬಿಜೆಪಿ ಮಿತ್ರಪಕ್ಷ ಎಲ್ ಜೆಪಿ ಕೂಡಾ ಕಣಕ್ಕೆ

ನವದೆಹಲಿ, ಜನವರಿ 14: ಭಾರತೀಯ ಜನತಾ ಪಕ್ಷದ ಮಿತ್ರಪಕ್ಷವಾದ ಲೋಕ ಜನಶಕ್ತಿ ಪಕ್ಷ ಕೂಡಾ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗಿಳಿಯುವುದಾಗಿ ಘೋಷಿಸಿದೆ.

70 ಕ್ಷೇತ್ರಕ್ಕೆ 1400ಕ್ಕೂ ಅಧಿಕ ಮಂದಿ ಟಿಕೆಟ್ ಅಕಾಂಕ್ಷಿಗಳ ಸಂಭಾವ್ಯ ಪಟ್ಟಿಯನ್ನು ಬಿಜೆಪಿ ಪರಿಶೀಲಿಸುತ್ತಿದೆ. ಇನ್ನೊಂದೆಡೆ ಹರ್ಯಾಣದ ಮಿತ್ರಪಕ್ಷ ಜೆಜೆಪಿ ಕೂಡಾ ದೆಹಲಿ ಚುನಾವಣಾ ಕಣದಲ್ಲಿ ಏಕಾಂಗಿಯಾಗಿ ಸ್ಪರ್ಧಿಗಿಳಿದಿದೆ. ಈಗ ಎಲ್ ಜೆಪಿ ಕೂಡಾ ಎಲ್ಲಾ 70 ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ಸಜ್ಜಾಗಿದೆ.

ಎಲ್ ಜೆಪಿ ಮುಖಂಡ, ದೆಹಲಿ ಚುನಾವಣೆ ಉಸ್ತುವಾರಿ ಕಾಲಿ ಪಾಂಡೆ ಅವರು ಎಲ್ ಜೆಪಿ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಮಾತುಕತೆ ನಡೆದಿಲ್ಲ, ಈ ಬಗ್ಗೆ ಬಿಜೆಪಿ ವರಿಷ್ಠರು ನಿರ್ಧರಿಸಲಿದ್ದಾರೆ ಎಂದಿದ್ದಾರೆ.

Delhi Assembly Elections: BJP ally LJP to fight on all seats

ಆಲ್ ಜಾರ್ಖಂಡ್ ವಿದ್ಯಾರ್ಥಿ ಯೂನಿಯನ್(ಎಜೆಎಸ್ ಯು), ಎಲ್ ಜಿ ಜೊತೆ ಬಿಜೆಪಿ ಮೈತ್ರಿ ಸಾಧಿಸಲು ಸಾಧ್ಯವಾಗಿರಲಿಲ್ಲ.

2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿದೆ. ದೆಹಲಿಯಲ್ಲಿ ಫೆಬ್ರವರಿ 08ರಂದು ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+