ದೆಹಲಿ ಚಾಂದಿನಿ ಚೌಕ್ ನಲ್ಲಿ ಬಾಂಬ್ ಸ್ಫೋಟ, ವ್ಯಕ್ತಿ ಸಾವು

Posted By: Prithviraj
Subscribe to Oneindia Kannada

ನವದೆಹಲಿ, ಅಕ್ಟೋಬರ್, 25: ದೇಶ ರಾಜಧಾನಿ ನವದೆಹಲಿಯಲ್ಲಿ ಬಾಂಬ್ ಸ್ಪೋಟ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಮಂಗಳವಾರ(ಅ.25) ನಡೆದಿದೆ.

ಘಟನೆಯಲ್ಲಿ 5ಮಂದಿ ಗಾಯಗೊಂಡಿದ್ದಾರೆ. ವಿಷಯ ತಿಳಿದ ಕೂಡಲೇ ಪೊಲೀಸರು ಶೀಘ್ರವೇ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿ, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

Delhi Chandni Chowk Naya Bazar Explosion

ಇಲ್ಲಿಯ ಚಾಂದ್ನಿ ಚೌಕ್ ನ ನಯಾ ಬಜಾರ್ ನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಪೋಟಕದಲ್ಲಿ ಪ್ರಬಲವಾದ ಸಿಡಿಮದ್ದನ್ನು ಬಳಸಿರಿವುದು ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಈ ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
One person dead and several injured in Delhi's Naya Bazar area off Chandini Chowk. Police official rushed to the spot and are investigating.
Please Wait while comments are loading...