• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಸೋಂಕಿಲ್ಲ

|

ನವದೆಹಲಿ, ಜೂನ್ 9: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಕೊರೊನಾ ಸೋಂಕಿಲ್ಲ ಎಂಬುದನ್ನು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಆಸ್ಪತ್ರೆ ನೀಡಿದ ವರದಿಯಲ್ಲಿ ನಗೆಟಿವ್ ಬಂದಿದ್ದು, ಈಗ ಕೊಂಚ ನಿರಾಳರಾಗಿದ್ದಾರೆ. ಜೂನ್ 7 ರಂದು ಅವರಿಗೆ ಗಂಟಲಿನಲ್ಲಿ ಕೆರೆತ, ಜ್ವರ ಕಾಣಿಸಿಕೊಂಡಿತ್ತು. ಅವರನ್ನು ಐಸೊಲೇಷನ್‌ನಲ್ಲಿರಿಸಲಾಗಿತ್ತು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲಗೆ ಕೊವಿಡ್ 19 ಟೆಸ್ಟ್

ಇತ್ತ ಸರ್ಕಾರದ ಸಭೆಗಳಲ್ಲಿ ಕೇವಲ ಉಪಮುಖ್ಯಮಂತ್ರಿ ಮನೀಶ್ ಸಿಸೊಡಿಯಾ ಮಾತ್ರ ಪಾಲ್ಗೊಳ್ಳುತ್ತಿದ್ದರು. ಕೊರೊನಾ ವೈರಸ್ ಬರುವುದಕ್ಕೂ ಮುನ್ನ ಕೇಜ್ರಿವಾಲ್ ಅವರಿಗೆ ಉಸಿರಾಟದ ತೊಂದರೆ ಗಂಟಲು ನೋವಿತ್ತು ಅದನ್ನು ಪ್ರಕೃತಿ ಚಿಕಿತ್ಸಾ ಪದ್ಧತಿ ಮೂಲಕ ಗುಣಪಡಿಸಿಕೊಂಡಿದ್ದರು.

ಕೇಜ್ರಿವಾಲ್ ಅವರಿಗೆ ಅನಾರೋಗ್ಯ ಪರಿಸ್ಥಿತಿ ಉಂಟಾದ ಕೂಡಲೇ ಅವರ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದಾಗಿತ್ತು. ಸಭೆಗಳನ್ನು ಮುಂದೂಡಲಾಗಿತ್ತು. ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಯಾವುದೇ ಸಭೆಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ ಇದೆ.

ಕೇಜ್ರಿವಾಲ್‌ಗೆ ಮಧುಮೇಹ ಕಾಯಿಲೆ ಇರುವುದರಿಂದ ತುಂಬಾ ಎಚ್ಚರಿಕೆಯಿಂದ ಇರಬೇಕು. ದೆಹಲಿಯಲ್ಲಿ ಕಳೆದ ಒಂದು ವಾರದಿಂದ ನಿತ್ಯ ಸಾವಿರಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ. ಮುಂದಿನ 10 ದಿನಗಳಲ್ಲಿ 50 ಸಾವಿರಕ್ಕಿಂತ ಹಚ್ಚು ಪ್ರಕರಣಗಳು ಕಂಡು ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.

English summary
Delhi Chief Minister Arvind Kejriwal does not have coronavirus, test negative.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X