ದೆಹಲಿ ಮುಖ್ಯಕಾರ್ಯದರ್ಶಿ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್, ತಂಡಕ್ಕೆ ಜಾಮೀನು
ನವದೆಹಲಿ, ಅಕ್ಟೋಬರ್ 25: ದೆಹಲಿಯ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷ(ಎಎಪಿ)ದ ಇತರ ಶಾಸಕರಿಗೆ ದೆಹಲಿಯ ಪಟಿಯಾಲಾ ಹೌಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಳೆದ ಫೆಬ್ರವರಿ 19 ರಂದು ಆಮ್ ಆದ್ಮಿ ಪಕ್ಷದ ಶಾಸಕರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ, ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ದೆಹಲಿಯ ಮುಖ್ಯ ಕಾರ್ಯದರ್ಶಿಯ ಮೇಲೆ ಹಲ್ಲೆ ನಡೆಸಲಾಗಿತ್ತು.
ಈ ಘಟನೆಯ ನಂತರ ಹಲ್ಲೆ ನಡೆಸಿದ್ದ ಅಮನಾತುಲ್ಲಾಹ್ ಖಾನ್ ಮತ್ತು ಪ್ರಕಾಶ್ ಜರ್ವಾಲ್ ಅವರ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಲಾಗಿತ್ತು.

ಈ ಘಟನೆಯ ನಂತರ ದೆಹಲಿಯಲ್ಲಿ ಐಎಎಸ್ ಅಧಿಕಾರಿಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಐಎಎಸ್ ಅಧಿಕಾರಿಗಳು ಪ್ರತಿಭಟನೆ ವಾಪಸ್ ಪಡೆಯುವಂತೆ ಒತ್ತಾಯಿಸಿ ನಂತರ ದೆಹಲಿಯ ಉಪ ಗವರ್ನರ್ ನಿವಾಸದಲ್ಲಿ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮುಂತಾದ ಎಎಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಒಟ್ಟು 11 ಶಾಸಕರಿಗೆ ಜಾಮೀನು ನೀಡಿರುವ ನ್ಯಾಯಾಲಯ, ತಲಾ 50,000 ರೂ. ಬಾಂಡ್ ವಿಧಿಸಿದೆ.












Click it and Unblock the Notifications