ಸಿಎಂ ಅರವಿಂದ್ ಕೇಜ್ರಿವಾಲ್ ಯಾಕೆ ನಾಮಪತ್ರ ಸಲ್ಲಿಸಲಿಲ್ಲ ಗೊತ್ತೆ?

Recommended Video

      ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಗರಂ | SIDDARAMAIAH | YEDIYURAPPA | ONEINDIA KANNADA

      ನವದೆಹಲಿ, ಜನವರಿ.20: ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ರಂಗು ಪಡೆದುಕೊಳ್ಳುತ್ತಿದ್ದು, ಸೋಮವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಮಪತ್ರ ಸಲ್ಸಿಸಬೇಕಿತ್ತು. ಆದರೆ ಪೂರ್ವ ನಿಗದಿಯಂತೆ ಕೇಜ್ರಿವಾಲ್ ನಾಮಪತ್ರ ಸಲ್ಲಿಸಲು ಸಾಧ್ಯವಾಗಲಿಲ್ಲ.

      ಸಿಎಂ ಅರವಿಂದ್ ಕೇಜ್ರಿವಾಲ್ ಸೋಮವಾರ ಮಧ್ಯಾಹ್ನ 3 ಗಂಟೆಗೆ ಬೃಹತ್ ರೋಡ್ ಶೋನಲ್ಲಿ ತೆರಳಿ ನಾಮಪತ್ರ ಸಲ್ಲಿಸಬೇಕಿತ್ತು. ಅದಕ್ಕೂ ಮೊದಲು ದೆಹಲಿಯಲ್ಲಿ ಬೃಹತ್ ರೋಡ್ ಶೋ ನಡೆಸಲಾಯಿತು. ಈ ವೇಳೆ ನಿರೀಕ್ಷೆಗೂ ಮೀರಿದ ಮಟ್ಟದಲ್ಲಿ ಕಾರ್ಯಕರ್ತರು ಹಾಗೂ ಜನರು ರೋಡ್ ಶೋನಲ್ಲಿ ಹರಿದು ಬಂದರು. ಹೀಗಾಗಿ ಅಂದುಕೊಂಡ ಸಮಯಕ್ಕೆ ಅರವಿಂದ್ ಕೇಜ್ರಿವಾಲ್ ನಾಮಪತ್ರ ಸಲ್ಲಿಸಲು ಸಾಧ್ಯವಾಗಲಿಲ್ಲ.

      ಎರಡು ಬಾರಿ ಗೆಲುವು ಸಾಧಿಸಿದ ನವದೆಹಲಿ ವಿಧಾನಸಭಾ ಕ್ಷೇತ್ರದಿಂದಲೇ ಈ ಬಾರಿ ಅರವಿಂದ್ ಕೇಜ್ರಿವಾಲ್ ಕಣಕ್ಕೆ ಇಳಿಯಲಿದ್ದಾರೆ. ಸೋಮವಾರದ ಬದಲು ಮಂಗಳವಾರ ನಾಮಪತ್ರ ಸಲ್ಲಿಸುತ್ತೇನೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

      Delhi CM Arvind Kejriwal Fails To File Nomination Today

      ರೋಡ್ ಶೋನಲ್ಲಿ ಭಾಗವಹಿಸಿದ ಜನರಿಗೆ ಸಿಎಂ ಧನ್ಯವಾದ:

      ಸೋಮವಾರ ನಡೆದ ಆಮ್ ಆದ್ಮಿ ಪಕ್ಷದ ವತಿಯಿಂದ ನಡೆದ ರೋಡ್ ಶೋನಲ್ಲಿ ಹರಿದು ಬಂದ ಎಲ್ಲರಿಗೂ ಸಿಎಂ ಅರವಿಂದ್ ಕೇಜ್ರಿವಾಲ್ ಧನ್ಯವಾದ ಅರ್ಪಿಸಿದರು. ಈಗಾಗಲೇ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಆಮ್ ಆದ್ಮಿ ಪಕ್ಷವು ಅಭ್ಯರ್ಥಿಗಳನ್ನು ಘೋಷಿಸಿ ಆಗಿದೆ. ಜನವರಿ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಫೆಬ್ರವರಿ.08ರಂದು ಮತದಾನ ಪ್ರಕ್ರಿಯೆ ನಡೆಯಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+