ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಆಮ್ಲಜನಕದ ಕೊರತೆ ತೀವ್ರವಾಗಿದೆ: ಅರವಿಂದ್ ಕೇಜ್ರಿವಾಲ್

|
Google Oneindia Kannada News

ನವದೆಹಲಿ, ಏಪ್ರಿಲ್ 21:ದೆಹಲಿಯಲ್ಲಿ ಆಮ್ಲಜನಕದ ಕೊರತೆ ತೀವ್ರವಾಗಿದ್ದು ಶೀಘ್ರ ಆಮ್ಲಜನಕ ಸರಬರಾಜು ಮಾಡುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ನಗರದ ಕೆಲವು ಆಸ್ಪತ್ರೆಗಳಲ್ಲಿ ಕೆಲವೇ ಗಂಟೆಗಳ ವೈದ್ಯಕೀಯ ಆಮ್ಲಜನಕ ಉಳಿದಿರುವ ಕಾರಣ ತಕ್ಷಣವೇ ಆಮ್ಲಜನಕವನ್ನು ಪೂರೈಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಕೇವಲ 6000 ಕ್ಯೂಬಿಕ್ ಮೀಟರ್ ಆಕ್ಸಿಜನ್ ಉಳಿದಿದ್ದು ಇದು ನಾಳೆ ಬೆಳಗ್ಗೆ 1 ಗಂಟೆಯವರೆಗೆ ಮಾತ್ರ ಬಳಕೆಯಾಗಲಿದೆ. ಕೂಡಲೇ ರಾಷ್ಟ್ರರಾಜಧಾನಿಗೆ ಆಕ್ಸಿಜನ್ ಅಗತ್ಯವಿದೆ ಎಂದಿದ್ದಾರೆ.

Arvind Kejriwal

ದೆಹಲಿಯಲ್ಲಿ ಆಮ್ಲಜನಕದ ಗಂಭೀರ ಸಮಸ್ಯೆ ಎದುರಾಗಿದೆ. ದೆಹಲಿಗೆ ತುರ್ತಾಗಿ ಆಮ್ಲಜನಕವನ್ನು ಒದಗಿಸುವಂತೆ ಮತ್ತೆ ಕೇಂದ್ರವನ್ನು ಒತ್ತಾಯಿಸುತ್ತಿದ್ದೇನೆ. ಕೆಲ ಆಸ್ಪತ್ರೆಗಳಲ್ಲಿ ಕೆಲವೇ ಗಂಟೆಗಳವರೆಗೆ ಮಾತ್ರ ಆಮ್ಲಜನಕ ಪೂರೈಕೆಯಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿದರು.

ದೆಹಲಿಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ವಿಧಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Breaking: ದೆಹಲಿಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್: ಕೇಜ್ರಿವಾಲ್Breaking: ದೆಹಲಿಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್: ಕೇಜ್ರಿವಾಲ್

ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಬಂದ್ ಮಾಡಲಾಗುತ್ತಿದ್ದು, ಅಗತ್ಯ ಸೇವೆಗಳಲ್ಲಿ ವ್ಯತ್ಯಯವಿಲ್ಲ, ವಲಸೆ ಕಾರ್ಮಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿಯಲ್ಲಿ ನಿತ್ಯ 25 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಮದುವೆಗಳಿಗೆ ಅವಕಾಶ ಮಾಡಿಕೊಡಲಾಗುವುದು ಆದರೆ 50 ಜನರಿಗೆ ಮಾತ್ರ ಅವಕಾಶವಿರುತ್ತದೆ. ಇನ್ನುಳಿದಂತೆ ತುರ್ತು ಸೇವೆಗಳು ಲಭ್ಯವಿರಲಿವೆ.

ದೆಹಲಿಯಲ್ಲಿ ಖಾಸಗಿ ಕಚೇರಿಗಳ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವಂತೆ ತಿಳಿಸಲಾಗಿದೆ. ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 25,462 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಅನಿವಾರ್ಯ ಕಾರಣಗಳಿಂದ ಲಾಕ್‌ಡೌನ್ ವಿಧಿಸಲಾಗಿದೆ ಎಂದಿದ್ದಾರೆ.

English summary
Hospitals in Delhi are fast running out of oxygen supply crucial to treat Covid-19 patients. As per the information provided by the Delhi government to the high court, the city hospitals will run out of oxygen supply within a few hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X