ಅರವಿಂದ್ ಕೇಜ್ರಿವಾಲ್ ಕಾರಿನ ಮೇಲೆ ದೊಣ್ಣೆಗಳಿಂದ ದಾಳಿ

ನವದೆಹಲಿ, ಫೆಬ್ರವರಿ 8: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರ ಕಾರಿನ ಮೇಲೆ ಶುಕ್ರವಾರ ಗುಂಪೊಂದು ದೊಣ್ಣೆಗಳಿಂದ ದಾಳಿ ನಡೆಸಿದೆ. ಇಲ್ಲಿನ ನರೇಲಾದಲ್ಲಿ ಈ ಘಟನೆ ಸಂಭವಿಸಿದೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿಸಲಾಗಿದೆ.

ನೂರಕ್ಕೂ ಹೆಚ್ಚು ಮಂದಿ ಇದ್ದ ಗುಂಪು ಕೇಜ್ರಿವಾಲ್ ಇದ್ದ ಕಾರನ್ನು ತಡೆಯಲು ಯತ್ನಿಸಿದೆ. ಆ ನಂತರ ದೊಣ್ಣೆಗಳಿಂದ ದಾಳಿ ಮಾಡಿದೆ. ದೆಹಲಿ ಹೊರಭಾಗದಲ್ಲಿನ ಇಪ್ಪತ್ತೈದು ಅನಧಿಕೃತ ಕಾಲೋನಿಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಉದ್ಘಾಟನೆ ಮಾಡುವ ಸಲುವಾಗಿ ಅರವಿಂದ್ ಕೇಜ್ರಿವಾಲ್ ತೆರಳಿದ್ದಾಗ ಈ ಘಟನೆ ನಡೆದಿದೆ.

Delhi CM Arvind Kejriwals car attacked

ಕಾರಿನ ಕನ್ನಡಿ ಒಡೆದಿದ್ದು, ಉಳಿದಂತೆ ಯಾರಿಗೂ ಯಾವುದೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಇದೇ ವೇಳೆ, ಈ ದಾಳಿಯ ಹಿಂದೆ ಭಾರತೀಯ ಜನತಾ ಪಕ್ಷದ ಕೈವಾಡ ಇದೆ ಎಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಸದ್ಯಕ್ಕೆ ಘಟನೆ ಬಗ್ಗೆ ತನಿಖೆಯನ್ನು ಮುಂದುವರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+