ದೆಹಲಿಯಲ್ಲಿ ಓಮಿಕ್ರಾನ್ ಹೆಚ್ಚಳ: ಇಂದು ಸಿಎಂ ಹೊಸ ಮಾರ್ಗಸೂಚಿಗಳನ್ನು ಹೊರಡಿಸುವ ಸಾಧ್ಯತೆ

ಹೊಸದಿಲ್ಲಿ ಡಿಸೆಂಬರ್ 23: ಕೊರೊನಾ ವೈರಸ್‌ನ ಹೊಸ ರೂಪಾಂತರವಾದ ಓಮಿಕ್ರಾನ್‌ನ ಭೀತಿ ದೆಹಲಿಯಲ್ಲಿ ಹೆಚ್ಚುತ್ತಿದೆ. ದೆಹಲಿಯಲ್ಲಿ ಪ್ರಕರಣದ ಪಾಸಿಟಿವಿಟಿ ಪ್ರಮಾಣ ಮತ್ತೊಮ್ಮೆ ಹೆಚ್ಚಾಗಲಾರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ (ಡಿಸೆಂಬರ್ 23) ಮಹತ್ವದ ಸಭೆ ನಡೆಸಲಿದ್ದಾರೆ. ಇದರಲ್ಲಿ ಅವರು ಓಮಿಕ್ರಾನ್ ಬಗ್ಗೆ ಮಾಡಿದ ಸಿದ್ಧತೆಗಳನ್ನು ಪರಿಶೀಲಿಸುತ್ತಾರೆ. ಈ ಸಭೆಯ ನಂತರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಕೊರೊನಾ ಮತ್ತು ಓಮಿಕ್ರಾನ್ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಬಹುದು.

ಬುಧವಾರ ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 125 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಆದಾಗ್ಯೂ ಈ ಅವಧಿಯಲ್ಲಿ ಕೊರೊನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಇದು ಜೂನ್ 22 ರಿಂದ ಒಂದೇ ದಿನದಲ್ಲಿ ವರದಿಯಾದ ಅತಿ ಹೆಚ್ಚು ಪ್ರಕರಣವಾಗಿದೆ. ಆರೋಗ್ಯ ಇಲಾಖೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲಿ ಪ್ರಸ್ತುತ ಕೊರೊನಾ ಪ್ರಕರಣದ ಪಾಸಿಟಿವಿಟಿ ದರವು ಶೇಕಡಾ 0.20 ರಷ್ಟಿದೆ. ದೆಹಲಿಯಲ್ಲಿ ಇದುವರೆಗೆ 25,102 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ದೆಹಲಿಯಲ್ಲಿ ಇಲ್ಲಿಯವರೆಗೆ ವರದಿಯಾದ ಒಟ್ಟು ಕೋವಿಡ್ -19 ಪ್ರಕರಣಗಳ ಸಂಖ್ಯೆ 14,42,515 ಕ್ಕೆ ಏರಿಕೆಯಾಗಿದೆ. ಜೊತೆಗೆ ದೆಹಲಿಯಲ್ಲಿ 14.16 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್ -19 ಕಾಯಿಲೆಯಿಂದ ಗುಣಮುಖರಾಗಿದ್ದಾರೆ. ಡಿಸೆಂಬರ್‌ನಲ್ಲಿ ದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿನಿಂದ ಇದುವರೆಗೆ ನಾಲ್ಕು ಸಾವುಗಳು ದಾಖಲಾಗಿವೆ. ನವೆಂಬರ್‌ನಲ್ಲಿ 7 ಸಾವುಗಳು, ಅಕ್ಟೋಬರ್‌ನಲ್ಲಿ 4 ಮತ್ತು ಸೆಪ್ಟೆಂಬರ್‌ನಲ್ಲಿ 5 ಸಾವುಗಳು ಸಂಭವಿಸಿವೆ. ದೆಹಲಿಯಲ್ಲಿ ಈವರೆಗೆ 54 ಕ್ಕೂ ಹೆಚ್ಚು ಮತ್ತು ಭಾರತದಲ್ಲಿ 200ಕ್ಕೂ ಹೆಚ್ಚು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.

Delhi CM holds high-level meeting as Omicron cases rise

ಭಾರತದಲ್ಲೇ ದೆಹಲಿಯಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ದೆಹಲಿಯಲ್ಲಿ ಓಮಿಕ್ರಾನ್ ರೂಪಾಂತರದ ಗರಿಷ್ಠ 64 ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರದಲ್ಲಿ 54, ತೆಲಂಗಾಣ 24, ಕರ್ನಾಟಕ 19, ರಾಜಸ್ಥಾನ 18, ಕೇರಳ 15 ಮತ್ತು ಗುಜರಾತ್ 14 ಪ್ರಕರಣಗಳು ದಾಖಲಾಗಿವೆ. WHO ಪ್ರಕಾರ, ಓಮಿಕ್ರಾನ್ ಈಗ 89 ದೇಶಗಳಲ್ಲಿ ವರದಿಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಬುಲೆಟಿನ್ ಪ್ರಕಾರ, ಭಾರತದಲ್ಲಿ ಒಮಿಕ್ರಾನ್‌ನ ಒಟ್ಟು ಪ್ರಕರಣಗಳು 200 ದಾಟಿದೆ.

Delhi CM holds high-level meeting as Omicron cases rise

ಸದ್ಯ ಹೆಚ್ಚಾಗುತ್ತಿರುವ ರಜಾ ದಿನಗಳಲ್ಲಿ ಓಮಿಕ್ರಾನ್ ಹರಡುವ ಸಾಧ್ಯತೆ ಹೆಚ್ಚಾಗಿದ್ದು ಅನೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಇಲ್ಲಿಯವರೆಗೆ ಭಾರತವು 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 213 ಒಮಿಕ್ರಾನ್ ಪ್ರಕರಣಗಳನ್ನು ದಾಖಲಿಸಿದೆ. ದೇಶದಾದ್ಯಂತ ಒಟ್ಟಾರೆ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ 6.30ಕ್ಕೆ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಜೊತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಇಂದು ಉನ್ನತಮಟ್ಟದ ಸಭೆ ಕರೆದಿದ್ದಾರೆ.

Delhi CM holds high-level meeting as Omicron cases rise

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಈ ವಾರದ ಆರಂಭದಲ್ಲಿ ಕೋವಿಡ್ -19 ಪಾಸಿಟಿವ್ ವರದಿಯ ಎಲ್ಲಾ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗುವುದು ಮತ್ತು ಈ ಬಗ್ಗೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದರು. ಓಮಿಕ್ರಾನ್ ಪರಿಸ್ಥಿತಿ ಮತ್ತು ಅದರ ಪರಿಣಾಮಗಳು ಹಾಗೂ ಅದನ್ನು ಎದುರಿಸಲು ಕ್ರಮಗಳನ್ನು ಒಳಗೊಂಡಂತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದರು.

ಜೊತೆಗೆ ತಜ್ಞರ ಪ್ರಕಾರ ಓಮಿಕ್ರಾನ್ ರೂಪಾಂತರವು ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವುದರಿಂದ ದೆಹಲಿಯಲ್ಲಿ ಹೋಮ್ ಐಸೋಲೇಶನ್ ವ್ಯವಸ್ಥೆಯನ್ನು ಬಲಪಡಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು. ಆಸ್ಪತ್ರೆಯ ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ವೈರಸ್ ಅನ್ನು ಎದುರಿಸಲು ಅಗತ್ಯವಿರುವ ಎಲ್ಲದಕ್ಕೂ ಸರ್ಕಾರವು ಸಾಕಷ್ಟು ವ್ಯವಸ್ಥೆಯನ್ನು ಮಾಡಿದೆ ಎಂದು ಅವರು ಹೇಳಿದರು.

Recommended Video

      ಮೊಹಮ್ಮದ್ ಸಿರಾಜ್ ಅವರನ್ನು ಹಾಡಿ ಹೊಗಳಿದ ಸಚಿನ್ ತೆಂಡೂಲ್ಕರ್ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+