ದರ್ಯಾಗಂಜ್ ಹಿಂಸಾಚಾರ ಪ್ರಕರಣ 15 ಆರೋಪಿಗಳಿಗೆ ಜಾಮೀನು
ದೆಹಲಿ, ಜನವರಿ.09: ದೆಹಲಿಯ ದರ್ಯಾಗಂಜ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿಗಳಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗುರುವಾರ ವಿಚಾರಣೆ ನಡೆಸಿದ ಕೋರ್ಟ್ ಎಲ್ಲ 15 ಆರೋಪಿಗಳಿಗೆ ಜಾಮೀನು ಮಂಜೂರುಗೊಳಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ದೆಹಲಿಯಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಯುತಿತ್ತು. ಕಳೆದ ಡಿಸೆಂಬರ್.20ರಂದು ಪ್ರತಿಭಟನೆ ಸಂದರ್ಭದಲ್ಲಿ ದೆಹಲಿ ದರ್ಯಾಗಂಜ್ ನಲ್ಲಿ ಪರಿಸ್ಥಿತಿ ಹಿಂಸಾಸ್ವರೂಪ ಪಡೆದುಕೊಂಡಿತ್ತು.
ದರ್ಯಾಗಂಜ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿದ್ದು, 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದರು. 15 ಮಂದಿ ಆರೋಪಿಗಳನ್ನು ಈ ಹಿಂದೆ ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಅಪರಾಧ ವಿಭಾಗಕ್ಕೆ ಜಾಮೀನು ಅರ್ಜಿ ವರ್ಗಾವಣೆ:
ಜನವರಿ.08ರ ಬುಧವಾರ 15 ಮಂದಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ನ ನ್ಯಾಯಾಧೀಶ ಸತೀಶ್ ಕುಮಾರ್, ಕೇಂದ್ರ ನ್ಯಾಯಾಲಯಕ್ಕೆ ಅರ್ಜಿಯನ್ನು ವರ್ಗಾವಣೆ ಮಾಡಿದ್ದರು. ಇನ್ನು, ಹಿಂಸಾಚಾರದ ಪ್ರಕರಣವನ್ನು ದೆಹಲಿ ಅಪರಾಧ ವಿಭಾಗಕ್ಕೆ ವರ್ಗಾವಣೆಗೊಳಿಸಲಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, 15 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.












Click it and Unblock the Notifications