• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಿಜಾಮುದ್ದೀನ್ ಮರ್ಕಜ್‌ಗೆ ತೆರಳಿದ್ದ ಮಲೇಷ್ಯಾದ 122 ಮಂದಿಗೆ ಜಾಮೀನು

|

ನವದೆಹಲಿ, ಜುಲೈ 8: ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ವಿಧಿಸಿದ್ದ ನಿರ್ಬಂಧಗಳನ್ನು ಮೀರಿ ನಿಜಾಮುದ್ದೀನ್ ಮರ್ಕಜ್‌ನಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಮಲೇಷ್ಯಾದ 122 ಮಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.

   UN ಸಭೆಯಲ್ಲಿ Pakistan ವಿರುದ್ಧ ಭಾರತ ವಾಗ್ದಾಳಿ | Oneindia Kannada

   ದೆಹಲಿಯ ಚೀಫ್ ಮೆಟ್ರೋಪಾಲಿಟನ್ ನ್ಯಾಯಾಧೀಶರು ಮಲೇಷಿಯನ್ನರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಈಗ 10,000 ರೂಪಾಯಿ ವೈಯಕ್ತಿಕ ಬಾಂಡ್ ನೀಡಲು ಸೂಚನೆ ನೀಡಿರುವ ದೆಹಲಿ ಕೋರ್ಟ್ 122 ಜನ ವಿದೇಶಿಗರಿಗೆ ಜಾಮೀನು ಮಂಜೂರು ಮಾಡಿದೆ.

   ಜಮಾತ್ ಮಸೀದಿಗೆ ಹೋಗಿದ್ದವರ ರಾಜ್ಯಾವಾರು ಅಂಕಿ-ಅಂಶ ಇಲ್ಲಿದೆ

   ಕೇಂದ್ರ ಸರ್ಕಾರದ ಲಾಕ್ ಡೌನ್ ನಿರ್ಬಂಧಗಳ ಹೊರತಾಗಿಯೂ ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ಭಾಗವಹಿಸಿ, ಅಕ್ರಮ ಮಿಷನರಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ, ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ ಆರೋಪವನ್ನು ಇವರುಗಳ ವಿರುದ್ಧ ಹೊರಿಸಲಾಗಿತ್ತು.

   ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು ಶಿಕ್ಷೆಯ ಅವಧಿ ಕಡಿಮೆ ಮಾಡಿಸಬೇಕು ಹಾಗೂ ಈ ಪ್ರಕರಣವನ್ನು ಅತಿ ಶೀಘ್ರವೇ ಇತ್ಯರ್ಥಗೊಳಿಸಬೇಕೆಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಿದ್ಧಾರ್ತ್ ಮಾಲಿಕ್ ಗೆ ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ಜು.08 ಕ್ಕೆ ನಿಗದಿಪಡಿಸಲಾಗಿದೆ. ಎಲ್ಲಾ ವಿದೇಶಿ ನಾಗರಿಕರು ಹೊಟೆಲ್ ನಲ್ಲಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರುಪಡಿಸಲಾಗಿತ್ತು.

   English summary
   A Delhi court on Tuesday granted bail to 122 Malaysian nationals, who were charge-sheeted for attending Markaz at Nizamuddin in the national capital, by violating visa conditions, indulging in missionary activities illegally and violating government guidelines, issued in the wake of COVID-19 outbreak in the country.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more