• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎಂಜೆ ಅಕ್ಬರ್ ಮಾನಹಾನಿ ಪ್ರಕರಣ: ವರ್ಗಾವಣೆಯ ಆದೇಶ ಕಾಯ್ದಿರಿಸಿದ ಕೋರ್ಟ್

|

ನವದೆಹಲಿ, ಅಕ್ಟೋಬರ್ 14: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಬಿಜೆಪಿ ಸಂಸದ ಎಂಜೆ ಅಕ್ಬರ್ ಸಲ್ಲಿಸಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕೇ ಅಥವಾ ಬೇಡವೇ ಎಂಬ ಕುರಿತಾದ ತನ್ನ ಆದೇಶವನ್ನು ರೋಸ್ ಅವೆನ್ಯೂ ನ್ಯಾಯಾಲಯ ಬುಧವಾರ ಕಾಯ್ದಿರಿಸಿದೆ. ಅಕ್ಟೋಬರ್ 22ರಂದು ಆದೇಶ ಹೊರಬೀಳಲಿದೆ.

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್ ದಾಖಲಿಸಿದ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ಎರಡು ವರ್ಷದಿಂದ ವಿಚಾರಣೆ ನಡೆಸಲು ಪ್ರಯತ್ನಿಸುತ್ತಿರುವ ಮ್ಯಾಜಿಸ್ಟಿರಿಯಲ್ ನ್ಯಾಯಾಲಯದ ವ್ಯಾಪ್ತಿಗೆ ಅದು ಬರುವುದಿಲ್ಲ ಎನ್ನುವುದು ಕಂಡುಬಂದರೆ ಅಂತಿಮ ವಾದ ವಿವಾದ ಮಾತ್ರವಲ್ಲದೆ, ಇಡೀ ವಿಚಾರಣೆ ವ್ಯರ್ಥವಾಗಲಿದೆ ಎಂದು ನ್ಯಾಯಾಲಯ ಹೇಳಿದೆ.

ಪ್ರಿಯಾ ರಮಣಿಯನ್ನು ಹೋಟೆಲ್ ರೂಮ್ ನಲ್ಲಿ ಖಾಸಗಿಯಾಗಿ ಭೇಟಿ ಆಗಿಲ್ಲ: ಎಂ.ಜೆ. ಅಕ್ಬರ್

ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಲು ಸ್ಥಾಪಿಸಲಾಗಿರುವ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವ ಬದಲು ಅದನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವ ಸಂಬಂಧ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಎಸಿಎಂಎಂ ರವಾನಿಸಿತ್ತು.

ಎಂಜೆ ಅಕ್ಬರ್ ಕೇಸ್ : ಪತ್ರಕರ್ತೆ ಪ್ರಿಯಾ ರಮಣಿಗೆ ಜಾಮೀನು

ಮುಖ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸುಜಾತಾ ಕೊಹ್ಲಿ ಇದರ ಆದೇಶವನ್ನು ಕಾಯ್ದಿರಿಸಿದ್ದಾರೆ.

English summary
A Delhi court has reserved its order on shifting of MJ Akbar's defamation case against Priya Ramani to another court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X