ಸುನಂದಾ ಸಾವು: ದೆಹಲಿ ನ್ಯಾಯಾಲಯದಲ್ಲಿ ಇಂದು ವಿಚಾರಣೆ

ನವದೆಹಲಿ, ಮೇ 24: ಸುನಂದಾ ಪುಷ್ಕರ್ ಸಾವಿಗೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯ ಇಂದು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಮೇ 14 ರಂದು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದ ದೆಹಲಿ ಪೊಲೀಸರು ಸುನಂದಾ ಸಾವಿನಲ್ಲಿ ಕಾಮಗ್ರೆಸ್ ಮುಖಂಡ ಶಶಿ ತರೂರ್ ಅವರನ್ನು ಆರೋಪಿ ಎಂದು ಉಲ್ಲೇಖಿಸಿದ್ದರು. ಅಷ್ಟೇ ಅಲ್ಲದೆ ಅವರ ವಿರುದ್ಧ ಭಾರತೀಯ ದಂಡ ಸಂಹಿಗೆಯ 306(ಆತ್ಮಹತ್ಯೆಗೆ ಕುಮ್ಮಕ್ಕು), 498 A (ಪತಿ ಅಥವಾ ಪತಿಯ ಸಂಬಂಧಿಕರಿಂದ ಮಹಿಳೆಯ ಮೇಲೆ ನಡೆಯುವ ಕ್ರೌರ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಚಾರ್ಜ್ ಶೀಟ್ ಕುರಿತು ಪ್ರತಿಕ್ರಿಯೆ ನೀಡಿದ್ದ ಶಶಿ ತರೂರ್ ಇದು ಅಸಮಂಜಸ ಎಂದು, ಆರೋಪಗಳನ್ನು ತಳ್ಳಿಹಾಕಿದ್ದರು.

Delhi court to hear Sunanda Pushkar death case today

2014 ರ ಜನವರಿ 14 ರಂದು ದೆಹಲಿಯ ಪಂಚತಾರಾ ಹೋಟೆಲ್ ವೊಂದರಲ್ಲಿ ಸುನಂದಾ ಪುಷ್ಕರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಅವರು ಆತ್ಮಹತ್ಯೆ ಮಾಡಿಕೊಂದಿದ್ದಾರೆಂದು ಹೇಳಲಾಗಿತ್ತಾದರೂ, ಇದು ಅಸಹಜ ಸಾವು ಎಂದು ನಂತರ ದೂರಲಾಗಿತ್ತು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+