ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾರಿಗೆ ಕೊವಿಡ್-19 ಪಾಸಿಟಿವ್

|
Google Oneindia Kannada News

ನವದೆಹಲಿ, ಸಪ್ಟೆಂಬರ್.14: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಎರಡನೇ ಅಲೆ ಸೃಷ್ಟಿಯ ಆತಂಕ ಎದುರಾಗಿದೆ. ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ತಮಗೆ ಕೊವಿಡ್-19 ಸೋಂಕು ಖಾತ್ರಿಯಾಗಿರುವ ಬಗ್ಗೆ ಸ್ವತಃ ಡಿಸಿಎಂ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. "ಅಲ್ಪ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೊರೊನಾವೈರಸ್ ಸೋಂಕಿತ ತಪಾಸಣೆಯನ್ನು ಮಾಡಿಸಿಕೊಂಡಿದ್ದೆನು. ಈ ವೇಳೆ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ನಾನು ಸೆಲ್ಫ್ ಐಸೋಲೇಷನ್ ನಲ್ಲಿದ್ದೇನೆ" ಎಂದು ಮನೀಶ್ ಸಿಸೋಡಿಯಾ ಬರೆದುಕೊಂಡಿದ್ದಾರೆ.

 Delhi Deputy CM Manish Sisodia Tests Positive For Coronavirus, Goes Into Isolation

ಅನಂತಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಕೊರೊನಾ ವೈರಸ್ ಪಾಸಿಟಿವ್ಅನಂತಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಕೊರೊನಾ ವೈರಸ್ ಪಾಸಿಟಿವ್

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಡಿಸಿಎಂ ಮನೀಶ್ ಸಿಸೋಡಿಯಾ, ವೈದ್ಯಕೀಯ ತಪಾಸಣೆ ವೇಳೆಯಲ್ಲಿ ಜ್ವರದ ಹೊರತಾಗಿ ಯಾವುದೇ ಸೋಂಕಿನ ಲಕ್ಷಣಗಳು ಇರಲಿಲ್ಲ. ಬೇರೆ ಯಾವುದೇ ರೀತಿ ಆರೋಗ್ಯ ಸಮಸ್ಯೆಗಳಿಲ್ಲ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರ ಆಶೀರ್ವಾದದಿಂದ ಗುಣಮುಖನಾಗಿ ಕರ್ತವ್ಯಕ್ಕೆ ಹಾಜರಾಗುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

ನವದೆಹಲಿಯಲ್ಲಿ 3329 ಮಂದಿಗೆ ಕೊವಿಡ್-19:

ಕಳೆದ 24 ಗಂಟೆಗಳಲ್ಲಿ 44884 ಜನರಿಗೆ ಕೊರೊನಾವೈರಸ್ ಸೋಂಕು ಪರೀಕ್ಷೆಯನ್ನು ನಡೆಸಲಾಗಿದ್ದು, 3329 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 221533ಕ್ಕೆ ಏರಿಕೆಯಾಗಿದ್ದು, 188122 ಸೋಂಕಿತರು ಗುಣಮುಖರಾಗಿದ್ದಾರೆ. 4770 ಜನರು ಮಹಾಮಾರಿಗೆ ಬಲಿಯಾಗಿದ್ದು, 28641 ಸಕ್ರಿಯ ಪ್ರಕರಣಗಳಿವೆ.

English summary
Delhi Deputy CM Manish Sisodia Tests Positive For Coronavirus, Goes Into Isolation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X