ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ 106 ದಿನಗಳಿಂದ ವೇತನ ಪಡೆದಿಲ್ಲ ಕೊವಿಡ್-19 ವೈದ್ಯರು!

|
Google Oneindia Kannada News

ನವದೆಹಲಿ, ಸಪ್ಟೆಂಬರ್.29: ಕೊರೊನಾವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರೇ ವೇತನ ಸಿಗದೇ ಪರದಾಡುವಂತಾ ಸ್ಥಿತಿ ನಿರ್ಮಾಣವಾಗಿದೆ. ನವದೆಹಲಿಯ ಹಿಂದೂ ರಾವ್ ಆಸ್ಪತ್ರೆಯ ಕೊವಿಡ್-19 ಸಿಬ್ಬಂದಿ ವೇತನ ನೀಡದ ಹಿನ್ನೆಲೆ ಮಂಗಳವಾರ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಆರು ತಿಂಗಳಿನಿಂದ ವೇತನ ನೀಡುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಇದರಿಂದಾಗಿ ತೀವ್ರ ಸಮಸ್ಯೆ ಆಗುತ್ತಿದೆ. ಕಳೆದ 106 ದಿನಗಳಿಂದ ಯಾವುದೇ ರೀತಿ ವೇತನವನ್ನು ಪಾವತಿಸದ ಹಿನ್ನೆಲೆ ತೊಂದರೆ ಅನುಭವಿಸುತ್ತಿದ್ದೇವೆ ಎಂದು ವೈದ್ಯಕೀಯ ಸಿಬ್ಬಂದಿಯು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಯುರ್ವೇದ್ ಚಿಕಿತ್ಸೆಯಿಂದ 5 ದಿನಗಳಲ್ಲೇ ಕೊವಿಡ್-19 ನೆಗೆಟಿವ್!ಆಯುರ್ವೇದ್ ಚಿಕಿತ್ಸೆಯಿಂದ 5 ದಿನಗಳಲ್ಲೇ ಕೊವಿಡ್-19 ನೆಗೆಟಿವ್!

ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಜೂನ್ ಅಂತ್ಯದವರೆಗಿನ ವೇತನವನ್ನು ಪಾವತಿಸಲಾಗಿದೆ. ಕೊವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ಸಿಬ್ಬಂದಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಪ್ರತಿಭಟನಾಕಾರರು ಶಾಂತ ರೀತಿಯಿಂದ ವರ್ತಿಸಬೇಕು ಎಂದು ನವವದೆಹಲಿ ಉತ್ತರದ ಮಹಾನಗರ ಪಾಲಿಕೆ ಮೇಯರ್ ಜೈಪ್ರಕಾಶ್ ತಿಳಿಸಿದ್ದಾರೆ.

Delhi Doctors Protest Alleging Non-Payment Of Salaries Over Last 106 Days

ಭಾರತದಲ್ಲಿ ಹೆಚ್ಚುತ್ತಿರುವ ಕೊವಿಡ್-19 ಪ್ರಕರಣ:

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 61 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 70589 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕಳೆದ ಸೋಮವಾರ ಬೆಳಗ್ಗೆ 9 ಗಂಟೆಯಿಂದ ಬುಧವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 776 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 96318ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ. ಈ ಪೈಕಿ 51,01,398 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 9,47,576 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Recommended Video

Bengaluru Moving ಕೊರೊನ ನಡುವೆ ಟ್ರಾಫಿಕ್ ಸಮಸ್ಯೆಗೆ ಸಿಗಲಿದೆಯೇ ಉಪಾಯ | Oneindia Kannada

English summary
Delhi Doctors Protest Alleging Non-Payment Of Salaries Over Last 106 Days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X