ಕೊರೊನಾ ವೈರಸ್ ಸೋಂಕಿತರಿಗೆ ದೆಹಲಿಯಲ್ಲೇ ಹೊಸ ಮದ್ದು

ನವದೆಹಲಿ, ಏಪ್ರಿಲ್.15: ಕೊರೊನಾ ವೈರಸ್ ಸೋಂಕು ನಿವಾರಣೆಗೆ ಇದುವರೆಗೂ ಔಷಧಿ ಪತ್ತೆಯಾಗಿಲ್ಲ. ಹಗಲು ಇರುಳು ಎನ್ನದೇ ವಿಜ್ಞಾನಿಗಳು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಲಸಿಕೆ ಪತ್ತೆ ಮಾಡುವುದಕ್ಕಾಗಿ ಶ್ರಮಿಸುತ್ತಿದ್ದಾರೆ. ಇದರ ನಡುವೆ ಅಮೆರಿಕಾದಲ್ಲಿ ಪ್ರಯೋಗಿಸಿದ ಅಸ್ತ್ರವನ್ನೇ ಭಾರತ ಸರ್ಕಾರ ಪ್ರಯೋಗಿಸಲು ಮುಂದಾಗಿದೆ.

ನವದೆಹಲಿ ಸರ್ಕಾರವು ಕೊರೊನಾ ವೈರಸ್ ಸೋಂಕಿತರನ್ನು ಪಾರು ಮಾಡುವ ಉದ್ದೇಶದಿಂದ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನವನ್ನು ಬಳಸುವುದಾಗಿ ಹೇಳಿದೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಈಗಾಗಲೇ ಈ ಚಿಕಿತ್ಸಾ ವಿಧಾನವನ್ನು ಕೊರೊನಾ ವೈರಸ್ ಸೋಂಕಿತರ ಮೇಲೆ ಪ್ರಯೋಗಿಸಲಾಗಿದೆ.

ಕೊರೊನಾ ವೈರಸ್ ಸೋಂಕು ತಗಲಿ ಗುಣಮುಖರಾದ ವ್ಯಕ್ತಿಗಳ ರಕ್ತವನ್ನು ತೆಗೆದುಕೊಂಡು ಸೋಂಕಿತರಿಗೆ ಇಂಜೆಕ್ಟ್ ಮಾಡಲಾಗುತ್ತದೆ. ಇದರಿಂದ ಗಂಭೀರ ಸ್ಥಿತಿಯಲ್ಲಿ ಇರುವ ಕೊರೊನಾ ವೈರಸ್ ಸೋಂಕಿತನ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ.

Delhi Government Decide To Convalescent Plasma Therapy For Treat Coronavirus Patient

ದೆಹಲಿಯಲ್ಲಿ ಸೋಂಕಿತರಿಗೆ ಹೊಸ ಚಿಕಿತ್ಸಾ ವಿಧಾನ:

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಎರಡನೇ ಸ್ಥಾನದಲ್ಲಿದೆ. ಈ ಹಿನ್ನೆಲೆ ಸೋಂಕಿತರ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಬಳಸಲಾಗುತ್ತದೆ ಎಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಟ್ವೀಟ್ ಮಾಡಿದ್ದಾರೆ.

ನವದೆಹಲಿಯಲ್ಲಿ ಇದುವರೆಗೂ 30 ಮಂದಿ ಕೊರೊನಾ ವೈರಸ್ ನಿಂದ 30ಕ್ಕೂ ಅಧಿಕ ಮಂದಿ ಪ್ರಾಣ ಬಿಟ್ಟಿದ್ದರೆ, 1,561 ಜನರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರ ನಡುವೆ 31 ಜನರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿರುವ ಬಗ್ಗೆ ತಿಳಿದು ಬಂದಿದೆ.

ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಎಂದರೇನು?:

ಕೊರೊನಾ ವೈರಸ್ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆದು ಗುಣಮುಖರಾದ ವ್ಯಕ್ತಿಗಳ ರಕ್ತವನ್ನು ಸಂಗ್ರಹಿಸಲಾಗುತ್ತದೆ. ಈ ರಕ್ತವನ್ನು ಗಂಭೀರ ಸ್ಥಿತಿಯಲ್ಲಿ ಇರುವ ಕೊರೊನಾ ವೈರಸ್ ಸೋಂಕಿತರಿಗೆ ನೀಡಲಾಗುತ್ತದೆ. ಈ ಚಿಕಿತ್ಸಾ ವಿಧಾನವನ್ನು ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಎಂದು ವೈದ್ಯಕೀಯ ಭಾಷೆಯಲ್ಲಿ ಹೇಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+