ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತಿಮ ಸೆಮಿಸ್ಟರ್ ಸಹಿತ ಪದವಿ ಪರೀಕ್ಷೆ ರದ್ದುಗೊಳಿಸಿದ ದೆಹಲಿ

|
Google Oneindia Kannada News

ದೆಹಲಿ, ಜುಲೈ 11: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಲು ದೆಹಲಿ ಸರ್ಕಾರ ಸೂಚಿಸಿದೆ.

Recommended Video

Drone Prathap ಇಷ್ಟು ದಿನ ಹೇಳಿದ್ದೆಲ್ಲಾ ಸುಳ್ಳಾ ? | Oneindia Kannada

ಕೊರೊನಾ ಭೀತಿ ಹಿನ್ನೆಲೆ ಅಂತಿಮ ವರ್ಷದ ಪರೀಕ್ಷೆ ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಿ, ಈ ಹಿಂದಿನ ಪೂರ್ವ ಪರೀಕ್ಷೆಗಳ ಆಧಾರದಲ್ಲಿ ಅಂಕಗಳನ್ನು ನೀಡಿ ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಪ್ರಸ್ತುತ ಸನ್ನಿವೇಶದಲ್ಲಿ ಪರೀಕ್ಷೆ ನಡೆಸುವುದು ಉತ್ತಮವಲ್ಲ. ಮಕ್ಕಳ ಹಿತಾದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ ಎಂದು ದೆಹಲಿ ಸಚಿವ ತಿಳಿಸಿದ್ದಾರೆ.

ಪದವಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಪದವಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ

ಕೇಂದ್ರದ ವ್ಯಾಪ್ತಿಯಲ್ಲಿ ಬರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಇದೇ ರೀತಿಯ ನಿರ್ಧಾರ ತೆಗೆದುಕೊಳ್ಳುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ರ ಬರೆದಿದ್ದಾರೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

Delhi Govt Decided To Cancel All Delhi State University Exams Including Final Exams

ಇದಕ್ಕೂ ಮುಂಚೆ ದೆಹಲಿ ವಿಶ್ವವಿದ್ಯಾಲಯ ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆಗಳನ್ನು ಆಗಸ್ಟ್ 15 ರಂದು ನಡೆಸಲು ತೀರ್ಮಾನಿಸಿದ್ದವು. ಈ ನಿರ್ಧಾರ ಪ್ರಕಟಣೆಯಾದ ಎರಡು ದಿನಗಳ ಬಳಿಕ ಪರೀಕ್ಷೆ ರದ್ದು ಮಾಡಲಾಗಿದೆ.

ಈ ಕಡೆ ಕರ್ನಾಟಕದಲ್ಲಿ ಅಂತಿಮ ವರ್ಷದ ಹಾಗೂ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪದವಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲೂ ರಾಜ್ಯ ಸರ್ಕಾರ ನಿರ್ಧರಿಸಿದೆ.

English summary
Delhi govt has decided to cancel all Delhi state university exams including final exams in view of COVID19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X