ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ: ಮೇ 24ರವರೆಗೂ ಲಾಕ್‌ಡೌನ್‌ ವಿಸ್ತರಿಸಿದ ಕೇಜ್ರಿವಾಲ್ ಸರ್ಕಾರ

|
Google Oneindia Kannada News

ನವದೆಹಲಿ, ಮೇ 16: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ಹಿನ್ನೆಲೆ ಮುಂದಿನ ಒಂದು ವಾರದವರೆಗೂ ಲಾಕ್‌ಡೌನ್‌ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್‌ ನಿಯಮಗಳನ್ನೇ ಮುಂದುವರಿಸಲಾಗುತ್ತದೆಯೇ ವಿನಃ ಯಾವುದೇ ಕ್ರಮಗಳನ್ನು ಸಡಿಲಗೊಳಿಸುವುದಿಲ್ಲ ಎಂದು ಹೇಳಿದರು.

ನವದೆಹಲಿ ಜಿಟಿಬಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಏರಿಕೆ ಆಗುತ್ತಿದೆ. ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಇಳಿಕೆ ಕಂಡು ಬಂದಿದೆ ಎಂದರು.

ದೆಹಲಿಯಲ್ಲಿ ಆಕ್ಸಿಜನ್ ಕಾನ್ಸನ್‌ಟ್ರೇಟರ್ಸ್ ಬ್ಯಾಂಕ್: ಕೇಜ್ರಿವಾಲ್ದೆಹಲಿಯಲ್ಲಿ ಆಕ್ಸಿಜನ್ ಕಾನ್ಸನ್‌ಟ್ರೇಟರ್ಸ್ ಬ್ಯಾಂಕ್: ಕೇಜ್ರಿವಾಲ್

ಕೊರೊನಾವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಏಕಾಏಕಿ ಏರಿಕೆ ಕಂಡು ಬರದಿರಲಿ ಎನ್ನುವ ನಿಟ್ಟಿನಲ್ಲಿ ಮೇ 24ರ ಬೆಳಗ್ಗೆ 5 ಗಂಟೆವರೆಗೂ ಲಾಕ್‌ಡೌನ್‌ ವಿಸ್ತರಿಸಲಾಗುವುದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕಳೆದ ಏಪ್ರಿಲ್ 19ರಿಂದ ಲಾಕ್‌ಡೌನ್‌ ಜಾರಿಗೊಳಿಸಲಾಗಿದ್ದು, ನಾಲ್ಕನೇ ಬಾರಿ ವಿಸ್ತರಣೆ ಮಾಡಲಾಗುತ್ತಿದೆ.

Delhi Govt Extend Lockdown Till May 24th To Handle Covid-19 Situation

ದೆಹಲಿಯಲ್ಲಿ ಲಾಕ್‌ಡೌನ್‌ ವಿಸ್ತರಣೆಗೆ ಸಲಹೆ:

ಕೊರೊನಾವೈರಸ್ ಸೋಂಕಿನ ಹರಡುವಿಕೆಯ ಸರಪಳಿಯನ್ನು ತುಂಡರಿಸಲು ಹಾಗೂ ಸೋಂಕು ನಿಯಂತ್ರಿಸಲು ಮೇ 24ರ ಬೆಳಗ್ಗೆ 5 ಗಂಟೆವರೆಗೂ ಲಾಕ್‌ಡೌನ್‌ ವಿಸ್ತರಿಸುವಂತೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸರ್ಕಾರಕ್ಕೆ ಸಲಹೆ ನೀಡಿದೆ. ಲಾಕ್‌ಡೌನ್‌ ವಿಸ್ತರಣೆ ನಿಯಮದ ಅಡಿಯಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ನಿರ್ಬಂಧ ಸೇರಿದಂತೆ ಮೊದಲಿನ ನಿರ್ಬಂಧಗಳನ್ನು ಮುಂದುವರಿಸಲಾಗುವುದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 6430 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 13,87,411ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ ಮಹಾಮಾರಿಗೆ 337 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ 21,244ಕ್ಕೆ ಏರಿಕೆಯಾಗಿದೆ.

English summary
Delhi Govt Extend Lockdown Till May 24th To Handle Covid-19 Situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X