• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ವಿರುದ್ಧ ಹೋರಾಟ: ದಿಟ್ಟ ನಿರ್ಧಾರ ತೆಗೆದುಕೊಂಡ ದೆಹಲಿ ಸರ್ಕಾರ

|

ದೆಹಲಿ, ಜೂನ್ 12: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊವಿಡ್ ಅಪಾಯದಿಂದ ತಪ್ಪಿಸಿಕೊಳ್ಳಲು ದೆಹಲಿ ಸರ್ಕಾರ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದೆ.

ಸರ್ಕಾರ ಗೊತ್ತುಪಡಿಸಿರುವ ಎಲ್ಲ ಕೊವಿಡ್ ಆಸ್ಪತ್ರೆಗಳಲ್ಲಿ ಎಲ್ಲ ಬೆಡ್‌ಗಳಿಗೂ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಬೇಕು ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.

ಭಾರತದಲ್ಲಿ ಸಮುದಾಯ ಸೋಂಕು ಇಲ್ಲ: ಕೇಂದ್ರ ಸರ್ಕಾರದ ಪುನರುಚ್ಚಾರ

ಕಳೆದ ಒಂದು ವಾರದಿಂದ ದೆಹಲಿಯಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚಿದೆ. ಆದ್ದರಿಂದ ಐಸಿಯು ಬೆಡ್‌ಗಳನ್ನು ಹೆಚ್ಚಿಸಿ ಹಾಗೂ ಎಲ್ಲ ಬೆಡ್‌ಗಳಿಗೂ ಆಕ್ಸಿಜನ್ ವ್ಯವಸ್ಥೆ ಮಾಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ದೆಹಲಿಯಲ್ಲಿ ನಿನ್ನೆ 1877 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 65 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು ಸೋಂಕಿನ ಸಂಖ್ಯೆ 34687ಕ್ಕೆ ಏರಿದೆ.

24 ಗಂಟೆ ಅವಧಿಯಲ್ಲಿ 65 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 1085ಕ್ಕೆ ಜಿಗಿದಿದೆ. ಇನ್ನುಳಿದಂತೆ 12,731 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇನ್ನು20871 ಕೇಸ್ ಸಕ್ರಿಯವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

English summary
Delhi Government issues order directing all designated COVID19 hospitals to make oxygen facility available on all of their beds.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X