ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

5 ರಾಜ್ಯಗಳಿಂದ ದೆಹಲಿಗೆ ಹೋಗಲು ಕೊರೊನಾ ನೆಗಟಿವ್ ವರದಿ ಕಡ್ಡಾಯ

|
Google Oneindia Kannada News

ನವದೆಹಲಿ, ಫೆಬ್ರವರಿ.24: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾದ ಹಿನ್ನೆಲೆ ದೆಹಲಿ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಐದು ರಾಜ್ಯಗಳಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೊವಿಡ್-19 ನೆಗೆಟಿವ್ ವರದಿ ತರುವಂತೆ ನಿಯಮ ಜಾರಿಗೊಳಿಸಲಾಗುತ್ತಿದೆ.

ಮಹಾರಾಷ್ಟ್ರ, ಕೇರಳ, ಛತ್ತೀಸ್ ಗಢ, ಮಧ್ಯಪ್ರದೇಶ ಮತ್ತು ಪಂಜಾಬ್ ರಾಜ್ಯಗಳಿಂದ ನವದೆಹಲಿಗೆ ತೆರಳುವ ಪ್ರಯಾಣಿಕರು ಕೊರೊನಾವೈರಸ್ RT-PCR ಪರೀಕ್ಷೆಗೆ ಒಳಪಡಬೇಕು. ನೆಗೆಟಿವ್ ವರದಿ ಹೊಂದಿದ ಪ್ರಯಾಣಿಕರಿಗೆ ಮಾತ್ರ ದೆಹಲಿ ಪ್ರವೇಶಿಸುವುದಕ್ಕೆ ಅನುಮತಿ ನೀಡಲಾಗುತ್ತದೆ.

ಅಮೆರಿಕಾದಲ್ಲಿ ಒಂದೇ ದಿನ ಕೊರೊನಾಗೆ 2374 ಜನರು ಸಾವುಅಮೆರಿಕಾದಲ್ಲಿ ಒಂದೇ ದಿನ ಕೊರೊನಾಗೆ 2374 ಜನರು ಸಾವು

ಫೆಬ್ರವರಿ.26 ರಿಂದ ಮಾರ್ಚ್.15ರವರೆಗೂ ಈ ನಿಯಮವನ್ನು ಜಾರಿಗೊಳಿಸಲಾಗುತ್ತದೆ ಎಂದು ದೆಹಲಿ ಸರ್ಕಾರವು ಸ್ಪಷ್ಟಪಡಿಸಿದೆ. ಈ ಐದು ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ ಹೆಚ್ಚಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿಯಮವನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

Delhi Govt Makes Negative RT-PCR Test Report Mandatory For People Coming From These States

ಭಾರತದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹೊಸ ಅಲೆ ಭೀತಿ ಹೆಚ್ಚಾಗಿದೆ. ಒಂದೇ ದಿನ 13742 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 14,037 ಸೋಂಕಿತರು ಗುಣಮುಖರಾಗಿದ್ದು, 104 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಒಟ್ಟು 1,10,30,176 ಕೊರೊನಾವೈರಸ್ ಸೋಂಕಿತ ಪ್ರಕರಣಗಳಿದ್ದು, ಈಗಾಗಲೇ 1,07,26,702 ಸೋಂಕಿತರು ಗುಣಮುಖರಾಗಿದ್ದಾರೆ. ಮಹಾಮಾರಿಯಿಂದ ಇದುವರೆಗೂ 1,56,567 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ಭಾರತದಲ್ಲಿ 1,46,907 ಸಕ್ರಿಯ ಪ್ರಕರಣಗಳಿವೆ.

English summary
Delhi Govt Makes Negative RT-PCR Test Report Mandatory For People Coming From These States.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X