ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಲಾಕ್‌ಡೌನ್ ಮಾಡಲ್ಲ: ಕೊರೊನಾ ಸೋಂಕಿತರಿಗೆ ಆನ್‌ಲೈನ್ ಯೋಗ: ಕೇಜ್ರಿವಾಲ್

|
Google Oneindia Kannada News

ನವದೆಹಲಿ, ಜನವರಿ 11: ದೆಹಲಿಯಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿದ್ದು, ಸರ್ಕಾರ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮಹತ್ವದ ಘೋಷಣೆ ಮಾಡಿದ್ದಾರೆ.

ದೆಹಲಿಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೇ ವಿಚಾರವಾಗಿ ಮಾತನಾಡಿರುವ ಸಿಎಂ ಕೇಜ್ರಿವಾಲ್​ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಹೇರಿಕೆ ಮಾಡಲ್ಲ ಎಂದಿದ್ದಾರೆ.

 ದೆಹಲಿಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಖಾಸಗಿ ಕಚೇರಿಗಳು ಬಂದ್ ದೆಹಲಿಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಖಾಸಗಿ ಕಚೇರಿಗಳು ಬಂದ್

ದೇಶದಲ್ಲಿ ಕೋವಿಡ್ ಮೂರನೇ ಅಲೆ ಜೋರಾಗಿದೆ. ಪ್ರತಿದಿನ ಲಕ್ಷಾಂತರ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೋವಿಡ್​ ಪ್ರಕರಣಗಳ ಸಂಖ್ಯೆ ಏರುತ್ತಲೇ ಸಾಗಿದೆ.

Delhi Govt To Start Online Yoga Classes For Covid Patients In Home Isolation From January 12

ದೆಹಲಿಯಲ್ಲಿ ಪ್ರತಿದಿನ 20-22 ಸಾವಿರದಷ್ಟು ಕೋವಿಡ್ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಇದರ ನಿಯಂತ್ರಣಕ್ಕೆ ನೈಟ್​ ಕರ್ಫ್ಯೂ ಸೇರಿದಂತೆ ಇತರೆ ಮಾರ್ಗಸೂಚಿ ಜಾರಿ ಮಾಡಿರುವ ಬಗ್ಗೆ ಮಾತನಾಡಿದ ಕೇಜ್ರಿವಾಲ್​​, ಯಾವುದೇ ಕಾರಣಕ್ಕೂ ಲಾಕ್​ಡೌನ್ ಮಾಡಲ್ಲ ಎಂದರು.

ಮೂರನೇ ಅಲೆ ಕೋವಿಡ್ ತಡೆಗಟ್ಟಲು ನಾವು ಎಲ್ಲ ರೀತಿಯಿಂದಲೂ ಸಜ್ಜುಗೊಂಡಿದ್ದು, ಅಗತ್ಯಬಿದ್ದರೆ ಹೆಚ್ಚಿನ ಬೆಡ್​ಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ದೆಹಲಿಯಲ್ಲಿ ಸದ್ಯ ಪಾಸಿಟಿವಿಟಿ ದರ ಶೇ. 24ರಷ್ಟಿದೆ. ಮುಂದೆ ಏನಾಗುತ್ತದೆ ಎಂದು ಕಾದುನೋಡೋಣ ಎಂದಿರುವ ಅವರು, ಜನರ ಉದ್ಯೋಗದ ಮೇಲೆ ಯಾವುದೇ ಪರಿಣಾಮ ಬೀರಲು ನಮಗೆ ಇಷ್ಟವಿಲ್ಲ ಎಂದು ಹೇಳಿದರು.

ಆನ್​ಲೈನ್​ ಯೋಗ ತರಗತಿ: ಕೋವಿಡ್ ಸೋಂಕಿಗೊಳಗಾಗಿ ಹೋಂ ಕ್ವಾರಂಟೈನ್​​ಗೊಳಗಾಗುವ ಜನರಿಗೆ ಆನ್​ಲೈನ್ ಯೋಗ ತರಗತಿ ಪ್ರಾರಂಭಿಸುವುದಾಗಿಯೂ ತಿಳಿಸಿದ್ದಾರೆ. ಪ್ರಾಣಾಯಾಮ ಮತ್ತು ಯೋಗದಿಂದ ರೋಗನಿರೋಧಕ ಶಕ್ತಿ ಹೆಚ್ಚಾಗಲಿದ್ದು, ಅದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಲೋಕನಾಯಕ ಜೈಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸಂಬಂಧಿತ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ದೆಹಲಿಯಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಹೇರಿಕೆ ಮಾಡಲ್ಲ ಎಂದು ತಿಳಿಸಿರುವ ಅವರು, ಮೂರನೇ ಅಲೆ ಎದುರಿಸಲು ಸಜ್ಜಾಗಿದ್ದೇವೆ ಎಂದರು.

ದೆಹಲಿಯಲ್ಲಿರುವ ಖಾಸಗಿ ಕಚೇರಿಗಳು ಅಗತ್ಯ ಸೇವೆಗಳ ನಿಮಯದಿಂದ ವಿನಾಯಿತಿ ಪಡೆದಿರುವ ವಲಯಗಳನ್ನು ಹೊರತುಪಡಿಸಿ ಉಳಿದವರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ತಿಳಿಸಿದೆ.

ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋವಿಡ್ ಸೋಂಕನ್ನು ತಡೆಗಟ್ಟಲು ಎಲ್ಲಾ ರೆಸ್ಟೋರೆಂಟ್ ಹಾಗೂ ಬಾರ್‌ಗಳನ್ನು ಮುಚ್ಚಲಾಗಿದ್ದು, ಟೇಕ್‌ಅವೇಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಮಂಗಳವಾರ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

Recommended Video

Little Kashmir Girl Turns Reporter: ಹದಗೆಟ್ಟ ರಸ್ತೆ ಬಗ್ಗೆ ಈ ಪುಟಾಣಿ ಏನ್ ಹೇಳ್ತಿದ್ದಾಳೆ ನೋಡಿ | Oneindia

English summary
The Delhi government will launch online yoga and meditation classes for COVID-19 patients in home isolation from January 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X