20 ಎಎಪಿ ಶಾಸಕರ ಅನರ್ಹತೆ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಕಾರ

ನವದೆಹಲಿ, ಜನವರಿ 19: ದೆಹಲಿಯ 20 ಎಎಪಿ ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿರುವ ಚುನಾವಣಾ ಆಯೋಗದ ಕ್ರಮ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಆಮ್ ಆದ್ಮಿ ಪಕ್ಷಕ್ಕೆ ತಕ್ಷಣದ ನಿರಾಳತೆ ಸಿಕ್ಕಿಲ್ಲ.

ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು ಎಎಪಿ ಶಾಸಕರ ಆತಂಕ ಮುಂದುವರಿದಿದೆ.

ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಎಎಪಿ ಶಾಸಕರು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಪ್ರಕರಣದ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ನ್ಯಾಯಾಲಯ ಹೇಳಿದೆ. ಹೀಗಾಗಿ ಎಎಪಿ ಶಾಸಕರು ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಸೋಮವಾರದವರೆಗೆ ಕಾಯಬೇಕಾಗಿದೆ.

Delhi HC refuses to grant interim relief to AAP MLAs in Office of Profit case

ಲಾಭದಾಯಕ ಹುದ್ದೆ ಹೊಂದಿದ ಪ್ರಕರಣದಲ್ಲಿ ಎಎಪಿಯ 20 ಶಾಸಕರನ್ನು ಅನರ್ಹಗೊಳಿಸಿ ಎಂದು ಚುನಾವಣಾ ಆಯೋಗ ರಾಷ್ಟ್ರಪತಿಗೆ ಶಿಫಾರಸ್ಸು ಮಾಡಿದ್ದು ರಾಜಕೀಯ ಬಿರುಗಾಳಿ ಎಬ್ಬಿಸಿದೆ.

ಅರವಿಂದ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಗದ್ದುಗೆಯಲ್ಲಿರುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಆದರೆ ಚುನಾವಣಾ ಆಯೋಗದ ಮುಂದೆ ವಿಚಾರಣೆಯೇ ನಡೆದಿಲ್ಲ. ಶಾಸಕರು ಸರಕಾರಿ ಸೌಲಭ್ಯಗಳನ್ನು ಪಡೆದುಕೊಂಡಿಲ್ಲ ಎಂದು ಎಎಪಿ ವಾದಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+