ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಸಂಘರ್ಷ: ಹೆಡ್ ಕಾನ್‌ಸ್ಟೆಬಲ್ ಸಾವಿನ ಪ್ರಕರಣಕ್ಕೆ ತಿರುವು

|
Google Oneindia Kannada News

ನವದೆಹಲಿ, ಫೆಬ್ರವರಿ 26: ಈಶಾನ್ಯ ದೆಹಲಿಯ ಗೋಕಲ್ಪುರಿ ಪ್ರದೇಶದಲ್ಲಿ ಸೋಮವಾರ ನಡೆದ ಘರ್ಷಣೆ ವೇಳೆ ಜೀವಕಳೆದುಕೊಂಡ ದೆಹಲಿ ಪೊಲೀಸ್ ಹೆಡ್‌ ಕಾನ್‌ಸ್ಟೆಬಲ್ ರತನ್ ಲಾಲ್ ಅವರ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಭಟನೆ ವೇಳೆ ಎರಡು ಗುಂಪುಗಳ ನಡುವೆ ಹಿಂಸಾಚಾರ ನಡೆದಿತ್ತು. ಆಗ ಕಲ್ಲುತೂರಾಟದಲ್ಲಿ ರತನ್ ಲಾಲ್ ತಲೆಗೆ ತೀವ್ರವಾಗಿ ಗಾಯವಾಗಿತ್ತು. ಅದರಿಂದ ಅವರು ಮೃತಪಟ್ಟಿದ್ದರು ಎನ್ನಲಾಗಿತ್ತು. ಆದರೆ ಅವರ ಮರಣೋತ್ತರ ಪರೀಕ್ಷೆ ವರದಿ ಮಂಗಳವಾರ ಬಹಿರಂಗವಾಗಿದ್ದು, ಅವರು ಗುಂಡೇಟಿನ ಗಾಯಗಳಿಂದಾಗಿ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ನಮ್ಮ ತಂದೆ ಮಾಡಿದ ತಪ್ಪೇನು? ಈ ಮುಗ್ಧ ಮಕ್ಕಳಿಗೆ ಉತ್ತರ ಹೇಳುವವರಾರು?ನಮ್ಮ ತಂದೆ ಮಾಡಿದ ತಪ್ಪೇನು? ಈ ಮುಗ್ಧ ಮಕ್ಕಳಿಗೆ ಉತ್ತರ ಹೇಳುವವರಾರು?

ರತನ್ ಲಾಲ್ ಅವರ ದೇಹದೊಳಗೆ ಬುಲೆಟ್ ಒಂದು ಪತ್ತೆಯಾಗಿದೆ. ಅವರ ಎಡ ಭುಜದ ಮೂಲಕ ಒಳಹೊಕ್ಕ ಗುಂಡು, ಬಲಭಾಗದ ಭುಜದವರೆಗೂ ಸಾಗಿದೆ. ಇದರಿಂದ ಅವರು ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ. ಪರೀಕ್ಷೆ ವೇಳೆ ಗುಂಡನ್ನು ಹೊರತೆಗೆಯಲಾಗಿದೆ.

ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ

ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಈಶಾನ್ಯ ದೆಹಲಿಯಲ್ಲಿ ತೀವ್ರ ಹಿಂಸಾಚಾರ ಸಂಭವಿಸಿತ್ತು. ಉದ್ರಿಕ್ತ ಜನರ ಗುಂಪು ಮನೆ, ಅಂಗಡಿಗಳು, ಪೆಟ್ರೋಲ್ ಪಂಪ್, ವಾಹನ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿದ್ದರು. ಎದುರಾಳಿ ಗುಂಪುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಕಲ್ಲುತೂರಾಟದ ವೇಳೆ ಗಾಯ

ಕಲ್ಲುತೂರಾಟದ ವೇಳೆ ಗಾಯ

ಈ ಸಂದರ್ಭದಲ್ಲಿ ಗಲಭೆ ನಿಯಂತ್ರಿಸಲು ಗೋಕಲ್ಪುರಿ ಎಸಿಪಿ ಕಚೇರಿಯಿಂದ ತೆರಳಿದ್ದ ಹೆಡ್ ಕಾನ್‌ಸ್ಟೆಬಲ್ ರತನ್ ಲಾಲ್ ತೀವ್ರ ಗಾಯಗೊಂಡಿದ್ದರು. ಅವರೊಂದಿಗೆ ಡಿಸಿಪಿ ಶಹದರ, ಅಮಿತ್ ಶರ್ಮಾ ಕೂಡ ಕಲ್ಲುತೂರಾಟದಲ್ಲಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರತನ್ ಲಾಲ್ ಕೊನೆಯುಸಿರೆಳೆದಿದ್ದರು. ಕಲ್ಲು ತೂರಾಟದಿಂದ ಗಾಯಗೊಂಡು ಅವರ ಸತ್ತಿದ್ದಾರೆ ಎಂದು ಹೇಳಲಾಗಿತ್ತು.

ದೆಹಲಿಯಲ್ಲಿ ನಡೆದ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಸೇರಿ ಐವರು ಸಾವುದೆಹಲಿಯಲ್ಲಿ ನಡೆದ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಸೇರಿ ಐವರು ಸಾವು

ಪ್ರಧಾನಿ ಮೋದಿಗೆ ಪತ್ರ

ಪ್ರಧಾನಿ ಮೋದಿಗೆ ಪತ್ರ

42 ವರ್ಷದ ರತನ್ ಲಾಲ್ ಅವರ ಮೃತದೇಹವನ್ನು ಉತ್ತರ ದೆಹಲಿಯ ಬುರಾರಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ದಿದ್ದು, ಅಲ್ಲಿಂದ ಅವರ ಮೂಲ ಊರಾದ ರಾಜಸ್ಥಾನದ ಸಿಕಾರ್ ಜಿಲ್ಲೆಗೆ ಕರೆದೊಯ್ಯಲಾಗುತ್ತದೆ. ಬುಧವಾರ ಅಥವಾ ಗುರುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ. ರತನ್ ಲಾಲ್ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಹಾಗೂ ಅವರ ವಯಸ್ಸಾದ ತಾಯಿಗೆ ಪಿಂಚಣಿ ನೀಡಬೇಕು. ಈ ಬಗ್ಗೆ ಖಚಿತ ಭರವಸೆ ನೀಡುವವರೆಗೂ ಅಂತ್ಯ ಸಂಸ್ಕಾರ ನಡೆಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರಾಮಸ್ಥರು ಪತ್ರ ಬರೆದಿದ್ದಾರೆ.

ರಾಜಸ್ಥಾನ ಮೂಲದವರು

ರಾಜಸ್ಥಾನ ಮೂಲದವರು

ರಾಜಸ್ಥಾನದ ಸಿಕಾರ್ ಜಿಲ್ಲೆಯ ಫತೇಪುರ್ ತಿಹ್ವಾಲಿ ಗ್ರಾಮದ ಮಧ್ಯಮವರ್ಗದ ಕುಟುಂಬದ ನಿವಾಸಿಯಾದ ರತನ್ ಲಾಲ್, 1998ರಲ್ಲಿ ದೆಹಲಿ ಪೊಲೀಸ್ ಇಲಾಖೆಯನ್ನು ಸೇರಿಕೊಂಡಿದ್ದರು. 2004ರಲ್ಲಿ ಅವರು ಜೈಪುರದ ನಿವಾಸಿ ಪೂನಂ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ಮೂವರು ಮಕ್ಕಳಿದ್ದಾರೆ. ಬುರಾರಿಯಲ್ಲಿನ ರತನ್ ಲಾಲ್ ಅವರ ನಿವಾಸಕ್ಕೆ ಭೇಟಿ ನೀಡಲು ತೆರಳಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು. ಸ

English summary
An atopsy report of head constable Ratan Lal says, he was died of bullet injury, not stone pelting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X