• search

ದೆಹಲಿ ಆರೋಗ್ಯ ಸಚಿವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ನವದೆಹಲಿ, ಜೂನ್ 18: ಕಳೆದ ಏಳು ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರ ಆರೋಗ್ಯ ನಿನ್ನೆ(ಜೂ.17) ಮಧ್ಯರಾತ್ರಿಯ ಸಮಯಕ್ಕೆ ಹದಗೆಟ್ಟಿದ್ದರಿಂದ ಅವರನ್ನು ದೆಹಲಿಯ ಲೋಕ ನಾಯಕ ಜಯ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಈ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ ತಿಳಿಸಿದ್ದದಾರೆ. ಸತ್ಯೇಂದ್ರ ಜೈನ್ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅವರ ರಕ್ತದೊತ್ತಡ ಈಗ ಸಹಜ ಸ್ಥಿತಿಗೆ ಮರಳಿದೆ. ಸ್ವಲ್ಪ ಉಸಿರಾಟದ ಸಮಸ್ಯೆಗಳಿದ್ದರೂ, ಅವರ ಆರೋಗ್ಯ ಸ್ಥಿರವಾಗಿದೆ' ಎಂದು ಡಾ.ಜೆ ಎಸ್ ಪಾಸೆ ಹೇಳಿದ್ದಾರೆ.

  ಮುಂದುವರಿದ ಕೇಜ್ರಿವಾಲ್ ಧರಣಿ: ಪ್ರಧಾನಿ ಮೋದಿ ಕೊಂಚ ಓಗೊಡಬಾರದೇ?

  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಚಿವರಾದ ಗೋಪಾಲ ರೈ, ಸತ್ಯೇಂದ್ರ ಕುಮಾರ್ ಜೈನ್ ಮುಂತಾದವರು ಕಳೆದ ಏಳು ದಿನಗಳಿಂದ ಇಲ್ಲಿನ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರ ನಿವಾಸದಲ್ಲಿ ಧರಣಿ ನಡೆಸುತ್ತಿದ್ದಾರೆ. ಐಎಎಸ್ ಅಧಿಕಾರಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಈ ಧರಣಿ ನಡೆಯುತ್ತಿದೆ.

  Delhi Health Minister hospitalised on Day 7 of strike

  ಫೆಬ್ರವರಿಯಲ್ಲಿ ಅರವಿಂದ್ಕೇಜ್ರಿವಾಲ್ ನಿವಾಸದಲ್ಲಿ ಇಬ್ಬರು ಈಪಿ ಶಾಸಕರು ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದರೆಂಬ ವಿ‌ಷಯಕ್ಕೆ ಸಂಬಂಧಿಸಿದಂತೆ, ಹಲ್ಲೆ ಮಾಡಿದವರನ್ನು ಬಂಧಿಸುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆಂದು ಐಎಎಸ್ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Health Minister Satyendra Kumar Jain has been admitted to Lok Nayak Jai Prakash Narayan Hospital after his health deteriorated during the ongoing 'dharna' at Raj Niwas on late Sunday night.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more