ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಆರೋಗ್ಯ ಸಚಿವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

|
Google Oneindia Kannada News

ನವದೆಹಲಿ, ಜೂನ್ 18: ಕಳೆದ ಏಳು ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರ ಆರೋಗ್ಯ ನಿನ್ನೆ(ಜೂ.17) ಮಧ್ಯರಾತ್ರಿಯ ಸಮಯಕ್ಕೆ ಹದಗೆಟ್ಟಿದ್ದರಿಂದ ಅವರನ್ನು ದೆಹಲಿಯ ಲೋಕ ನಾಯಕ ಜಯ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ ತಿಳಿಸಿದ್ದದಾರೆ. ಸತ್ಯೇಂದ್ರ ಜೈನ್ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅವರ ರಕ್ತದೊತ್ತಡ ಈಗ ಸಹಜ ಸ್ಥಿತಿಗೆ ಮರಳಿದೆ. ಸ್ವಲ್ಪ ಉಸಿರಾಟದ ಸಮಸ್ಯೆಗಳಿದ್ದರೂ, ಅವರ ಆರೋಗ್ಯ ಸ್ಥಿರವಾಗಿದೆ' ಎಂದು ಡಾ.ಜೆ ಎಸ್ ಪಾಸೆ ಹೇಳಿದ್ದಾರೆ.

ಮುಂದುವರಿದ ಕೇಜ್ರಿವಾಲ್ ಧರಣಿ: ಪ್ರಧಾನಿ ಮೋದಿ ಕೊಂಚ ಓಗೊಡಬಾರದೇ?ಮುಂದುವರಿದ ಕೇಜ್ರಿವಾಲ್ ಧರಣಿ: ಪ್ರಧಾನಿ ಮೋದಿ ಕೊಂಚ ಓಗೊಡಬಾರದೇ?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಚಿವರಾದ ಗೋಪಾಲ ರೈ, ಸತ್ಯೇಂದ್ರ ಕುಮಾರ್ ಜೈನ್ ಮುಂತಾದವರು ಕಳೆದ ಏಳು ದಿನಗಳಿಂದ ಇಲ್ಲಿನ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರ ನಿವಾಸದಲ್ಲಿ ಧರಣಿ ನಡೆಸುತ್ತಿದ್ದಾರೆ. ಐಎಎಸ್ ಅಧಿಕಾರಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಈ ಧರಣಿ ನಡೆಯುತ್ತಿದೆ.

Delhi Health Minister hospitalised on Day 7 of strike

ಫೆಬ್ರವರಿಯಲ್ಲಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇಬ್ಬರು ಈಪಿ ಶಾಸಕರು ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದರೆಂಬ ವಿ‌ಷಯಕ್ಕೆ ಸಂಬಂಧಿಸಿದಂತೆ, ಹಲ್ಲೆ ಮಾಡಿದವರನ್ನು ಬಂಧಿಸುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆಂದು ಐಎಎಸ್ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

English summary
Health Minister Satyendra Kumar Jain has been admitted to Lok Nayak Jai Prakash Narayan Hospital after his health deteriorated during the ongoing 'dharna' at Raj Niwas on late Sunday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X