ಕೊರೊನಾದಿಂದ ಹೊರಬಿದ್ದ ದೆಹಲಿ ಸಚಿವ, ಇಂದು ಡಿಸ್ಚಾರ್ಜ್ ಸಾಧ್ಯತೆ
ದೆಹಲಿ, ಜೂನ್ 26: ಕೊರೊನಾ ಸೋಂಕಿಗೆ ತುತ್ತಾಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯಂದರ್ ಜೈನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂಬ ವಿಷಯ ಆಸ್ಪತ್ರೆಯಿಂದ ಬಹಿರಂಗವಾಗಿದೆ.
Recommended Video
ಪ್ಲಾಸ್ಮಾ ಥೆರಪಿ ಚಿಕಿತ್ಸೆ ಬಳಿಕ ಸತ್ಯಂದರ್ ಜೈನ್ ಅವರು ಗುಣಮುಖರಾಗಿದ್ದು, ಕೊರೊನಾ ಪರೀಕ್ಷೆಯಲ್ಲಿ ವರದಿ ಸಹ ನೆಗಿಟಿವ್ ಬಂದಿದೆ ಎನ್ನಲಾಗಿದೆ. ಕೊವಿಡ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿರುವ ದೆಹಲಿ ಸಚಿವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಜೂನ್ 16 ರಿಂದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೈನ್ ದಾಖಲಾಗಿದ್ದರು. ಈ ವೇಳೆ ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಅವರಿಗೆ ಆಕ್ಸಿಜನ್ ವ್ಯವಸ್ಥೆ ಮಾಡಿ ಐಸಿಯುಗೆ ಶಿಫ್ಟ್ ಮಾಡಲಾಯಿತು.

ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸತ್ಯಂದರ್ ಜೈನ್ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಇದೀಗ, ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.












Click it and Unblock the Notifications