ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಅಪಾಯ; ವಿಮಾನ, ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ

|
Google Oneindia Kannada News

ನವದೆಹಲಿ, ಜೂನ್ 3: ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದರ ಹಿನ್ನೆಲೆ ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಅನ್ನು ಜಾರಿಗೊಳಿಸುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ನೇತೃತ್ವದ ಪೀಠ, ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಗಳಲ್ಲಿ ಮಾಸ್ಕ್ ಧರಿಸದಿದ್ದರೆ ಅಂಥವರಿಗೆ ಭಾರೀ ದಂಡ ವಿಧಿಸಬೇಕು ಎಂದು ಅಭಿಪ್ರಾಯಪಟ್ಟಿದೆ. "ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಅಗತ್ಯವಿದ್ದರೆ ಈ ನಿಯಮಗಳನ್ನು ಉಲ್ಲಂಘಿಸುವವರನ್ನು ಪ್ರವೇಶ ನಿರ್ಬಂಧಿಸಬೇಕು," ಎಂದು ಪೀಠವು ವರದಿ ಮಾಡಿದೆ.

ಕೊರೊನಾ ವೈರಸ್ ಕಾಟದಿಂದ ಮಹಾರಾಷ್ಟ್ರದಲ್ಲಿ ಮತ್ತೆ ಕಡ್ಡಾಯವಾಗುತ್ತಾ ಮಾಸ್ಕ್!? ಕೊರೊನಾ ವೈರಸ್ ಕಾಟದಿಂದ ಮಹಾರಾಷ್ಟ್ರದಲ್ಲಿ ಮತ್ತೆ ಕಡ್ಡಾಯವಾಗುತ್ತಾ ಮಾಸ್ಕ್!?

ಫ್ಲೈಟ್ ಪರ್ಸರ್‌ಗಳು, ಗಗನಸಖಿಯರು, ಪೈಲಟ್‌ಗಳು ಸೇರಿದಂತೆ ವಿಮಾನ ನಿಲ್ದಾಣಗಳಲ್ಲಿನ ವಿಮಾನಯಾನ ಸಿಬ್ಬಂದಿಯನ್ನು ಅಧಿಕೃತಗೊಳಿಸಲು ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಪ್ರತ್ಯೇಕ ನಿರ್ಬಂಧಿತ ನಿರ್ದೇಶನಗಳನ್ನು ನೀಡಬೇಕು. ನಿಯಮಗಳನ್ನು ಪಾಲಿಸದ ಪ್ರಯಾಣಿಕರು ಅಥವಾ ಸಿಬ್ಬಂದಿಯ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು," ಎಂದು ಪೀಠವನ್ನು ಉಲ್ಲೇಖಿಸಿ ವರದಿ ಮಾಡಿದೆ.

ಕೊರೊನಾ ವೈರಸ್ ನಿಯಮ ಉಲ್ಲಂಘಿಸಿದರೆ ಪ್ರಕರಣ

ಕೊರೊನಾ ವೈರಸ್ ನಿಯಮ ಉಲ್ಲಂಘಿಸಿದರೆ ಪ್ರಕರಣ

ವಿಮಾನ ಪ್ರಯಾಣದ ಸಮಯದಲ್ಲಿ ಕೋವಿಡ್-19 ನಿಯಮಗಳ ಉಲ್ಲಂಘನೆಯ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಅಲ್ಲದೆ, ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಬೇಕು ಎಂದು ಪ್ರತಿಪಾದಿಸಿದೆ. ಈ "ನಿಯಮವನ್ನು ಜಾರಿಗೊಳಿಸುವುದು ತೀರಾ ಅವಶ್ಯಕವಾಗಿದೆ. ಈ ನಿಯಮಾವಳಿಗಳನ್ನು ಉಲ್ಲಂಘಿಸಿದ ಎಲ್ಲ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಬೇಕು. ಅಂಥವರನ್ನು ಪ್ರಯಾಣಿಕರ ಪಟ್ಟಿನಿಂದ ಹೊರಗಿಡಬಹುದು," ಎಂದು ಕೋರ್ಟ್ ನಿರ್ದೇಶನದಲ್ಲಿ ತಿಳಿಸಿದೆ.

ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವತ್ತ ಮಹಾರಾಷ್ಟ್ರ

ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವತ್ತ ಮಹಾರಾಷ್ಟ್ರ

ಮಹಾರಾಷ್ಟ್ರದಲ್ಲಿ ಕೋವಿಡ್-19 ಸಾಂಕ್ರಾಮಿಕ ಪಿಡುಗು ಹೊಸ ಅಲೆಯನ್ನು ಸೃಷ್ಟಿಸುವ ಆತಂಕವನ್ನು ಹುಟ್ಟಿಸಿದೆ. ಇದರ ಮಧ್ಯೆ ರಾಜ್ಯ ಸರ್ಕಾರ ಮಾಸ್ಕ್ ಅನ್ನು ಕಡ್ಡಾಯಗೊಳಿಸುವ ಬಗ್ಗೆ ಆಲೋಚಿಸುತ್ತಿದೆ. ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇದೇ ರೀತಿ ಏರಿಕೆಯಾಗುತ್ತಾ ಹೋದರೆ, ಮತ್ತೊಮ್ಮೆ ರಾಜ್ಯದಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಬಹುದು ಎಂದು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್

ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್

ನಗರ ಆರೋಗ್ಯ ಇಲಾಖೆ ಹಂಚಿಕೊಂಡ ಮಾಹಿತಿಯ ಪ್ರಕಾರ, ದೆಹಲಿಯಲ್ಲಿ ಒಂದೇ ದಿನದಲ್ಲಿ 373 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿತ್ತು. ಇದೇ ಅವಧಿಯಲ್ಲಿ ಇಬ್ಬರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರು. ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ.1.85ರಷ್ಟಾಗಿದೆ. ಇದರೊಂದಿಗೆ ದೆಹಲಿಯ ಕೋವಿಡ್-19 ಸೋಂಕಿತರ ಸಂಖ್ಯೆ 19,07,637ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 26,212ಕ್ಕೆ ಹೆಚ್ಚಾಗಿದೆ.

ದೇಶದಲ್ಲಿ ಒಂದೇ ದಿನ 3,861 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 3,861 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 3,861 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 10 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,363 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,169,599ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,622,757 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,651 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 22,191 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟಿದೆ.

Recommended Video

Upendra ಈಗ ಪ್ರಜಾಕೀಯದ ಬಗ್ಗೆ ಏನು ಹೇಳ್ತಾರೆ | OneIndia Kannada

English summary
Covid-19 Case Rises: Delhi High Court directed DGCA and airlines to strictly implement masks at airports and on flights. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X