ಮೆಹಬೂಬಾ ಮುಫ್ತಿ ಸಮನ್ಸ್‌ಗೆ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಕಾರ

ನವದೆಹಲಿ, ಮಾರ್ಚ್ 19: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ಗೆ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಮಾರ್ಚ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಮೆಹಬೂಬಾ ಮುಫ್ತಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಇದರ ವಿರುದ್ಧ ಮೆಹಬೂಬಾ ಮುಫ್ತಿ ಅವರು ತಡೆಯಾಜ್ಞೆ ಕೋರಿದ್ದರು.

ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ಪೀಠವು ಸಮನ್ಸ್ ವಿರುದ್ಧ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

Delhi High Court Refuses To Stay Summons Issued To Mehbooba Mufti By Enforcement Directorate

ಜಾರಿ ನಿರ್ದೇಶನಾಲಯವು ಈ ಬಾರಿಯೂ ಮುಫ್ತಿ ಅವರು ವೈಯಕ್ತಿಕವಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ಒತ್ತಾಯಿಸಬಾರದು ಎಂದು ಮುಫ್ತಿ ಪರ ವಕೀಲ ನಿತ್ಯಾ ರಾಮಕೃಷ್ಣನ್ ಅವರು ಮನವಿ ಮಾಡಿದ್ದರು.

ಈ ಕುರಿತು ವಿರೋಧ ವ್ಯಕ್ತಪಡಿಸಿದ ಇಡಿ ಪರ ಹಾಜರಿದ್ದ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಈ ಬಾರಿ ಮಫ್ತಿ ಅವರು ಇಡಿ ಅಧಿಕಾರಿಗಳ ಮುಂದೆ ಹಾಜರಾಗಲೇಬೇಕು ಎಂದು ವಾದ ಮುಂದುವರೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+