ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಮತ್ತೆ ಲಘು ಭೂಕಂಪ: 2.1 ತೀವ್ರತೆ ದಾಖಲು

|
Google Oneindia Kannada News

ನವದೆಹಲಿ, ಜೂನ್ 8: ದೆಹಲಿಯಲ್ಲಿ ಮತ್ತೆ ಲಘು ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.1 ತೀವ್ರತೆ ದಾಖಲಾಗಿದೆ.

ದೆಹಲಿಯಿಂದ 13 ಕಿ.ಮೀ ದೂರದ ಗುರುಗ್ರಾಮ ಗಡಿಯಲ್ಲಿ ಭೂಕಂಪದ ಕೇಂದ್ರಬಿಂದುವಿದೆ. ಹಾಗೆಯೇ 18 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ದೆಹಲಿ-ಎನ್‌ಸಿಆರ್‌ನಲ್ಲಿ 14 ಬಾರಿ ಭೂಕಂಪ ಸಂಭವಿಸಿದೆ.

ಭಾರತ-ಬಾಂಗ್ಲಾ ಗಡಿಯಲ್ಲಿ ಭೂಕಂಪ; 4.3 ತೀವ್ರತೆ ದಾಖಲು ಭಾರತ-ಬಾಂಗ್ಲಾ ಗಡಿಯಲ್ಲಿ ಭೂಕಂಪ; 4.3 ತೀವ್ರತೆ ದಾಖಲು

ಜೂನ್ 3 ರಂದು ಕೂಡ ದೆಹಲಿಯ ಸುತ್ತಮುತ್ತಲ ಪ್ರದೇಶದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿತ್ತು.ಮೇ 29 ರಂದು ರಾತ್ರಿ 9.08 ಕ್ಕೆ ಪೂರ್ವ ಹರಿಯಾಣ ಮತ್ತು ದೆಹಲಿ-ರಾಷ್ಟ್ರೀಯ ರಾಜಧಾನಿ ಪ್ರದೇಶದ (ಎನ್‌ಸಿಆರ್) ಕೆಲವು ಭಾಗಗಳನ್ನು ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ದಾಖಲಾಗಿತ್ತು.

Delhi Hit By Another Low-Intensity Earthquake, Epicentre In Gurgaon Border

ಭೂಕಂಪದ ಕೇಂದ್ರಬಿಂದು ಹರಿಯಾಣದ ರೋಹ್ಟಕ್ ಮತ್ತು ಆಳ 3.3 ಕಿ.ಮೀನಷ್ಟಿತ್ತು. ಕಳೆದ ಒಂದು ತಿಂಗಳಲ್ಲಿ ದೆಹಲಿ ಮತ್ತು ಹತ್ತಿರದ ಪ್ರದೇಶಗಳು ಕನಿಷ್ಠ 6-7 ಭೂಕಂಪಗಳನ್ನು ಅನುಭವಿಸಿವೆ, ಕರೋನವೈರಸ್ COVID-19 ಸಾಂಕ್ರಾಮಿಕ ರೋಗದಿಂದ ಈಗಾಗಲೇ ತೊಂದರೆಗಳನ್ನು ಎದುರಿಸುತ್ತಿರುವ ಜನರಿಗೆ ಉದ್ವಿಗ್ನತೆ ಹೆಚ್ಚುತ್ತಿದೆ.

English summary
A low-intensity earthquake of magnitude 2.1 hit Delhi today, according to the National Centre for Seismology. The earthquake was epicentred around 13 km of the bordering Gurgaon and had a depth of 18 km, the agency said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X