ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಲ್ಕತ್ತಾದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಇಂಡಿಯಾ ಗೇಟ್ ಬಳಿ ಕೇಂದ್ರದ ವಿರುದ್ಧ ಕೂಗು

|
Google Oneindia Kannada News

ದೆಹಲಿ, ಜನವರಿ.06: ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ವಿರೋಧಿಸಿ ಮಹಾರಾಷ್ಟ್ರದಲ್ಲೂ ವಿದ್ಯಾರ್ಥಿಗಳು ಬೀದಿಗೆ ಇಳಿದಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.

ಮಹಾರಾಷ್ಟ್ರದ ಇಂಡಿಯಾ ಗೇಟ್ ಬಳಿ ನೆರೆದ ಸಾವಿರಾರು ಪ್ರತಿಭಟನಾಕಾರರು ಜೆಎನ್ ಯುನಲ್ಲಿ ನಡೆದ ಹಿಂಸಾಚಾರಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಮಹಿಳೆಯರ ಮೇಲೆ ನಡೆಸಿದ ಹಲ್ಲೆ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಬಿಜೆಪಿಯೇ ಹಿಂದೆ ನಿಂತು ಜೆಎನ್ ಯುನಲ್ಲಿ ಹಿಂಸಾಚಾರ ಮಾಡಿಸಿತಾ?ಬಿಜೆಪಿಯೇ ಹಿಂದೆ ನಿಂತು ಜೆಎನ್ ಯುನಲ್ಲಿ ಹಿಂಸಾಚಾರ ಮಾಡಿಸಿತಾ?

ಒಂದೆಡೆ ಮಹಾರಾಷ್ಟ್ರದ ಮುಂಬೈನಲ್ಲಿರುವ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದೆಡೆ ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ಸುತ್ತ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ.

ಕೋಲ್ಕತ್ತಾದಲ್ಲೂ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್

ಒಂದೆಡೆ ಜೆಎನ್ ಯುನಲ್ಲಿ ಹಿಂಸಾಚಾರ ನಡೆದಿದ್ದನ್ನು ಖಂಡಿಸಿ ಹೋರಾಟ ತೀವ್ರಗೊಳ್ಳುತ್ತಿದೆ. ಇದರ ಮಧ್ಯೆ ಕೋಲ್ಕತ್ತಾದ ಸುಲೇಖಾ ಮಾರ್ಗ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜಾದವ್ ಪುರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಮುಂಬೈನ ಇಂಡಿಯಾ ಗೇಟ್ ಬಳಿ ಪ್ರತಿಭಟನೆ

ಇನ್ನು, ದೆಹಲಿ ಜೆಎನ್ ಯುನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಮುಂಬೈನ ಇಂಡಿಯಾ ಗೇಟ್ ಬಳಿ ತೀವ್ರ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಪೋಸ್ಟರ್ ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೈಯಲ್ಲಿ ದೀಪ ಹಿಡಿದು ನಿಂತ ಕಾರ್ಯಕರ್ತರು

ಕೈಯಲ್ಲಿ ದೀಪ ಹಿಡಿದು ನಿಂತ ಕಾರ್ಯಕರ್ತರು

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕ ನೊಂದಣಿ ಹಾಗೂ ದೆಹಲಿಯ ಜೆಎನ್ ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರವನ್ನು ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಮುಂಬೈನ ಇಂಡಿಯಾ ಗೇಟ್ ಬಳಿ ಕ್ಯಾಂಡಲ್ ಲೈನ್ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡಿನಲ್ಲೂ ವಿದ್ಯಾರ್ಥಿಗಳ ಪ್ರತಿಭಟನೆ

ತಮಿಳುನಾಡಿನಲ್ಲೂ ವಿದ್ಯಾರ್ಥಿಗಳ ಪ್ರತಿಭಟನೆ

ಜೆಎನ್ ಯುನಲ್ಲಿ ನಡೆದ ಹಿಂಸಾಚಾರವನ್ನು ವಿರೋಧಿಸಿ ಚೆನ್ನೈನಲ್ಲೂ ವಿದ್ಯಾರ್ಥಿಗಳು ಬೀದಿಗಿಳಿದಿದ್ದರು. ಕೈಯಲ್ಲಿ ಕ್ಯಾಂಡಲ್ ಹಿಡಿದ ಪ್ರತಿಭಟನಾಕಾರರು ನಗರದಲ್ಲಿ ಪಾದಯಾತ್ರೆ ನಡೆಸುವ ಮೂಲಕ ಆಕ್ರೋಶ ಹೊರ ಹಾಕಿದರು.

English summary
Delhi JNU Violence: Students And Congress Protest Near India Gate In Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X