ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯ ಕರ್ನಾಟಕ ಭವನದಲ್ಲಿ ಸಾಹಿತಿಗಳ ಪಾರ್ಟಿ? ನ್ಯಾಯಮೂರ್ತಿ ಅಸಮಾಧಾನ

|
Google Oneindia Kannada News

ನವದೆಹಲಿ, ಫೆಬ್ರವರಿ 7: ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ರಾಜ್ಯದ ಸಾಹಿತಿಗಳು ಪಾರ್ಟಿ ನಡೆಸುತ್ತಿದ್ದ ವೇಳೆ ಪಕ್ಕದ ಕೊಠಡಿಯಲ್ಲಿದ್ದ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಆದರೆ, ಭವನದಲ್ಲಿ ಯಾವುದೇ ಪಾರ್ಟಿ ನಡೆಸುತ್ತಿರಲಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ. ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರೊ.ಸಿದ್ದರಾಮಯ್ಯ ನವದೆಹಲಿಯ ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರೊ.ಸಿದ್ದರಾಮಯ್ಯ

ಕಾರ್ಯಕ್ರಮ ನಿಮಿತ್ತ ನವದೆಹಲಿಗೆ ತೆರಳಿರುವ ರಾಜ್ಯದ ಸಾಹಿತಿಗಳು ಸಂತೋಷ ಕೂಟ ನಡೆಸುತ್ತಿದ್ದರು ಎನ್ನಲಾಗಿದೆ. ಅದರಲ್ಲಿ ಎಸ್‌.ಜಿ. ಸಿದ್ದರಾಮಯ್ಯ, ಮನು ಬಳಿಗಾರ್, ಡಾ. ಸಿದ್ದಲಿಂಗಯ್ಯ, ಎಚ್ ಎಸ್ ಶಿವಪ್ರಕಾಶ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಈ ವೇಳೆ ಅವರು ಜೋರಾಗಿ ಮಾತನಾಡುತ್ತಿದ್ದರಿಂದ ಪಕ್ಕದ ಕೊಠಡಿಯಲ್ಲಿದ್ದ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರಿಗೆ ತೊಂದರೆಯಾಗಿದೆ ಎಂದು ಹೇಳಲಾಗಿದೆ.

delhi karnataka bhavan kannada writers party supreme court justice dinesh maheshwari unhappy

ಅಸಮಾಧಾನಗೊಂಡ ನ್ಯಾಯಮೂರ್ತಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಬಳಿಕ ಪೊಲೀಸರು ಸರಿಪಡಿಸಿದ್ದರು ಎನ್ನಲಾಗಿದೆ.

ಈ ಬಗ್ಗೆ ಸುದ್ದಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ, ನಾವು ಯಾವುದೇ ಪಾರ್ಟಿ ಮಾಡುತ್ತಿರಲಿಲ್ಲ. ಗೆಳೆಯರು ಸೇರಿ ಮಾತನಾಡುವಾಗ ಜೋರಾದ ಧ್ವನಿ ಕೇಳಿಸುತ್ತಿತ್ತು. ನ್ಯಾಯಮೂರ್ತಿಗಳಿಗೆ ಇದರಿಂದ ತೊಂದರೆಯಾಗಿದ್ದ ಗಮನಕ್ಕೆ ಬಂದಿದೆ. ಅದನ್ನು ಸರಿಪಡಿಸಿದ್ದೇವೆ ಎಂದು ತಿಳಿಸಿದ್ದಾರೆ.

ಮೊದಲ ಸಲ ಕರ್ನಾಟಕ ಭವನಕ್ಕೆ ಒಟ್ಟಿಗೆ ಬಂದ ದೇವೇಗೌಡ ದಂಪತಿ ಮೊದಲ ಸಲ ಕರ್ನಾಟಕ ಭವನಕ್ಕೆ ಒಟ್ಟಿಗೆ ಬಂದ ದೇವೇಗೌಡ ದಂಪತಿ

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ದಿನೇಶ್ ಮಹೇಶ್ವರಿ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನಾಗಿ ಇತ್ತೀಚೆಗಷ್ಟೇ ಕೊಲಿಜಿಯಂ ಆಯ್ಕೆ ಮಾಡಿತ್ತು.

English summary
Supreme Court justice Dinesh Maheshwari was said to be unhappy over the Kannada writers who were doing 'Party' at Karnataka Bhavan in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X