• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲೆಫ್ಟಿನೆಂಟ್ ಗೌರ್ನರ್ ಕಚೇರಿಯ 13 ಸಿಬ್ಬಂದಿಗೆ ಕೋವಿಡ್ ಸೋಂಕು

|

ನವದೆಹಲಿ, ಜೂನ್ 02 : ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಕಚೇರಿಯ 13 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ದೆಹಲಿಯಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 20,834.

ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಕಚೇರಿಯ ಎಲ್ಲಾ ಸಿಬ್ಬಂದಿಗಳಿಗೆ ಕೋವಿಡ್ - 19 ಪರೀಕ್ಷೆ ಮಾಡಿಸಲಾಗಿತ್ತು. ಮಂಗಳವಾರ ಕೆಲವು ವರದಿಗಳು ಕೈ ಸೇರಿದ್ದು 13 ಸಿಬ್ಬಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ವೇತನ ನೀಡಲು ದುಡ್ಡಿಲ್ಲ, 5000 ಕೋಟಿ ಅನುದಾನಕ್ಕೆ ದೆಹಲಿ ಮನವಿ

ರಾಜ್ ನಿವಾಸ್ ಮಾರ್ಗದಲ್ಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿ ಇದೆ. ಇನ್ನೂ ಹಲವು ಸಿಬ್ಬಂದಿಗಳು ಕೋವಿಡ್ - 19 ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವಾರ ಮೊದಲ ಪ್ರಕರಣ ಪತ್ತೆಯಾದ ಬಳಿಕ ಎಲ್ಲಾ ಸಿಬ್ಬಂದಿಗೆ ಪರೀಕ್ಷೆ ಮಾಡಿಸಲು ತಿಳಿಸಲಾಗಿತ್ತು.

ಲಾಹೋರ್‌ ಮೃಗಾಲಯದ ಸಿಬ್ಬಂದಿ ಹಾಗೂ ಪ್ರಾಣಿಗಳಿಗೆ ಕೊರೊನಾ ಪರೀಕ್ಷೆ

ಕೇಂದ್ರ ಆರೋಗ್ಯ ಸಚಿವಾಲಯ ಕಚೇರಿಯ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡರೆ ಅನುಸರಿಸಬೇಕಾದ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇಡೀ ಕಚೇರಿಯನ್ನು ಎರಡು ದಿನಗಳ ಕಾಲ ಮುಚ್ಚಿ ಸ್ಯಾನಿಟೈಸ್ ಮಾಡಬೇಕಾಗುತ್ತದೆ.

ಸರ್ಕಾರಿ ಸಿಬ್ಬಂದಿಗೆ ಶುಭಸುದ್ದಿ: ಕಚೇರಿ ಹಾಜರಾಗುವ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿಯಲ್ಲಿ ಕೋವಿಡ್ - 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದುವರೆಗೂ ಸೋಂಕಿತರ ಸಂಖ್ಯೆ 20, 834. 523 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.

ಅಕ್ಕ-ಪಕ್ಕದ ರಾಜ್ಯದಿಂದ ಆಗಮಿಸುವವರ ಮೂಲಕ ಸೋಂಕು ಹಬ್ಬುತ್ತಿದೆ ಎಂದು ಸರ್ಕಾರ ಹೇಳಿತ್ತು. ಆದ್ದರಿಂದ, ರಾಜ್ಯದ ಗಡಿಗಳನ್ನು ಜೂನ್ 1ರಿಂದ ಒಂದು ವಾರಗಳ ಕಾಲ ಮುಚ್ಚಲಾಗಿದೆ. ಅಗತ್ಯ ವಸ್ತುಗಳ ಸರಬರಾಜು ವಾಹನಗಳು ಮಾತ್ರ ರಾಜ್ಯವನ್ನು ಪ್ರವೇಶಿಸಬಹುದಾಗಿದೆ.

English summary
Delhi lieutenant governor Anil Baijal office 13 persons tested positive for COVID -19. All those working at the lieutenant governor office undergone for tests and waiting for the reports.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X