ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಒಂದೂವರೆ ತಿಂಗಳ ನಂತರ ಕಡಿಮೆಯಾದ ಕೊರೊನಾ ಪ್ರಕರಣ

|
Google Oneindia Kannada News

ನವದೆಹಲಿ, ಮೇ 17: ದೆಹಲಿಯಲ್ಲಿ ಸುಮಾರು ಒಂದೂವರೆ ತಿಂಗಳ ನಂತರ ಸೋಮವಾರ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದ್ದು, 5000ಕ್ಕೂ ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿವೆ. ಏಪ್ರಿಲ್ 5ರ ನಂತರ ಇದೇ ಮೊದಲ ಬಾರಿ ಐದು ಸಾವಿರಕ್ಕೂ ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿವೆ.

ಹಲವು ವಾರಗಳ ನಂತರ ದೆಹಲಿಯಲ್ಲಿ ಕೊರೊನಾ ಪಾಸಿಟಿವಿಟಿ ದರವೂ ತಗ್ಗಿದ್ದು, 10%ಗೂ ಕಡಿಮೆ ಪಾಸಿಟಿವಿಟಿ ದರ ದಾಖಲಾಗಿದೆ. ಆದರೆ ಇದಕ್ಕೆ ಸಮಾಧಾನ ಪಟ್ಟುಕೊಳ್ಳುವಂತಿಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪರೀಕ್ಷೆಯೂ ತಗ್ಗಿರುವುದನ್ನು ಗಮನಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಔಷಧಿಗಳನ್ನು ಮರಳಿಸುವಂತೆ ಗೌತಮ್ ಗಂಭೀರ್‌ಗೆ ದೆಹಲಿ ಹೈಕೋರ್ಟ್ ಸೂಚನೆಕೋವಿಡ್ ಔಷಧಿಗಳನ್ನು ಮರಳಿಸುವಂತೆ ಗೌತಮ್ ಗಂಭೀರ್‌ಗೆ ದೆಹಲಿ ಹೈಕೋರ್ಟ್ ಸೂಚನೆ

ದೆಹಲಿಯಲ್ಲಿ ಸೋಮವಾರ 4524 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಆದರೆ 340 ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದು ಚಿಂತಾಜನಕ ವಿಷಯವಾಗಿದೆ. ಕಳೆದ ತಿಂಗಳು ರಾಜ್ಯದಲ್ಲಿ ಪಾಸಿಟಿವಿಟಿ ದರ 30%ಗೆ ತಲುಪಿದ್ದು, ಕಳೆದ 24 ಗಂಟೆಗಳಲ್ಲಿ 8.42%ಗೆ ಇಳಿದಿದೆ.

Delhi Logged Less Than 5000 Covid Cases On May 17 Since April

ಸದ್ಯಕ್ಕೆ ದೆಹಲಿಯಲ್ಲಿ 56,000 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು, ಚೇತರಿಕೆ ಪ್ರಮಾಣ 94.42% ಆಗಿದೆ. ಮರಣ ಪ್ರಮಾಣ 1.56% ಆಗಿದೆ. ಕಳೆದ 24 ಗಂಟೆಗಳಲ್ಲಿ 10,918 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದುವರೆಗೂ ದೆಹಲಿಯಲ್ಲಿ ಸೋಂಕಿನಿಂದ 21,846 ಮಂದಿ ಸಾವನ್ನಪ್ಪಿದ್ದಾರೆ.

English summary
Delhi has logged less than 5,000 daily coronavirus cases on monday for the first time since April 5
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X