ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಕಡಿಮೆಯಾಗದ ಕೊರೊನಾ ಅಬ್ಬರ, ಮತ್ತೆ 7546 ಪ್ರಕರಣಗಳು ಪತ್ತೆ

|
Google Oneindia Kannada News

ನವದೆಹಲಿ, ನವೆಂಬರ್ 20: ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೃತಪಟ್ಟವರ ಸಂಖ್ಯೆ 8 ಸಾವಿರಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 7,546 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ಒಂದೇ ದಿನ 6,685 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೆಹಲಿಯಲ್ಲಿ ಸೋಂಕಿನಿಂದ ಗುಣಮುಖರಾದ ಸೋಂಕಿತರ ಸಂಖ್ಯೆ 4,59,368ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರಸ್ತುತ ಕೇವಲ 43,221ಕೊರೊನಾ ಸಕ್ರಿಯ ಪ್ರಕರಣಗಳು ಇದೆ.

ಮಾಸ್ಕ್ ಧರಿಸದಿದ್ದರೆ 2 ಸಾವಿರ ರೂ ದಂಡ: ದೆಹಲಿ ಸರ್ಕಾರ ಆದೇಶಮಾಸ್ಕ್ ಧರಿಸದಿದ್ದರೆ 2 ಸಾವಿರ ರೂ ದಂಡ: ದೆಹಲಿ ಸರ್ಕಾರ ಆದೇಶ

ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 7,546 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 5,10,630ಕ್ಕೆ ಏರಿಕೆಯಾಗಿದೆ. ಅಂತೆಯೇ ಒಂದೇ ದಿನ ದೆಹಲಿಯಲ್ಲಿ 98 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 8,041ಕ್ಕೆ ಏರಿಕೆಯಾಗಿದೆ.

 Delhi Logs 7,546 Fresh Covid Cases, Death Cross 8,000-Mark

ದೀಪಾವಳಿ ಕಳೆದ ಬಳಿಕ ವಾಯು ಮಾಲಿನ್ಯವೂ ಹೆಚ್ಚಾಗಿದೆ, ಕೊರೊನಾ ಸೋಂಕಿತರ ಸಂಖ್ಯೆಯೂ ವಿಪರೀತವಾಗುತ್ತಿದೆ. ಅಕ್ಟೋಬರ್ ಅಂತ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ದೆಹಲಿಯಲ್ಲಿ ಮಾಸ್ಕ್ ಧರಿಸದವರಿಗೆ ದಂಡವನ್ನು ನಾಲ್ಕು ಪಟ್ಟು ಹೆಚ್ಚಳ ಮಾಡಲಾಗಿದೆ. ಮಾಸ್ಕ್ ಧರಿಸದವರು 2 ಸಾವಿರ ರೂ ದಂಡ ವಿಧಿಸಬೇಕು.

Recommended Video

ಭಾರತಕ್ಕೇ ಗಡಿಪಾರು ಮಾಡ್ತಾರಾ!! | Oneindia Kannada

English summary
The upward march of Covid in Delhi continued today with the city logging 7,546 fresh cases, up from 7,486 in 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X