ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ: 20 ಜನ ಸಜೀವ ದಹನ

|
Google Oneindia Kannada News

ನವದೆಹಲಿ ಮೇ 13: ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಪಿಲ್ಲರ್ ಸಂಖ್ಯೆ 544 ರ ಸಮೀಪವಿರುವ ಕಟ್ಟಡದಲ್ಲಿ ಶುಕ್ರವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಎಷ್ಟು ತೀವ್ರವಾಗಿದೆಯೆಂದರೆ ಅದು ಮೂರು ಅಂತಸ್ತಿನ ಕಟ್ಟಡವನ್ನು ಸಂಪೂರ್ಣವಾಗಿ ಆವರಿಸಿದೆ. ದೆಹಲಿ ಪೊಲೀಸರಿಗೆ ಸಂಜೆ 4.40ಕ್ಕೆ ಪಿಸಿಆರ್ ಕರೆ ಮೂಲಕ ಬೆಂಕಿಯ ಬಗ್ಗೆ ಮಾಹಿತಿ ಸಿಕ್ಕಿದೆ. ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆದಿದೆ. ಈ ಬೆಂಕಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಕಿಯ ಬಗ್ಗೆ ಮಾಹಿತಿ ಪಡೆದ ತಕ್ಷಣ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಬೆಂಕಿಯ ತೀವ್ರತೆ ಕಂಡು 14 ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿವೆ. ಬೆಂಕಿಯ ತೀವ್ರತೆಯ ಹಿನ್ನೆಲೆಯಲ್ಲಿ ಸಮೀಪದ ಕಟ್ಟಡಗಳನ್ನೂ ತೆರವು ಮಾಡಲಾಗಿದೆ. ಬೆಂಕಿ ಎಷ್ಟು ತೀವ್ರವಾಗಿದೆ ಎಂದರೆ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಸ್ಥಳೀಯ ಪೊಲೀಸರು ತಕ್ಷಣ ಚನಾ ಸ್ಥಳಕ್ಕೆ ಧಾವಿಸಿ ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಿಸಿದರು. ಪೊಲೀಸ್ ಸಿಬ್ಬಂದಿ ಕಟ್ಟಡದ ಕಿಟಕಿಗಳನ್ನು ಒಡೆದು ಒಳಗಡೆ ಸಿಲುಕಿದ್ದ ಜನರನ್ನು ಮತ್ತು ಗಾಯಾಳುಗಳನ್ನು ಸ್ಥಳಾಂತರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Delhi: Massive fire in multi-storey building: one death

ಘಟನೆಯ ಬಗ್ಗೆ ಮಾಹಿತಿ ನೀಡಿದ ದೆಹಲಿ ಪೊಲೀಸರು, ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಇದು 3 ಅಂತಸ್ತಿನ ವಾಣಿಜ್ಯ ಕಟ್ಟಡವಾಗಿದ್ದು, ಇದನ್ನು ಸಾಮಾನ್ಯವಾಗಿ ಕಂಪನಿಗಳಿಗೆ ಕಚೇರಿ ಸ್ಥಳವನ್ನು ಒದಗಿಸಲು ಬಳಸಲಾಗುತ್ತದೆ ಎಂದು ತಿಳಿದುಬಂದಿದೆ. ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿಯನ್ನು ಹೊಂದಿರುವ ಕಟ್ಟಡದ ಮೊದಲ ಮಹಡಿಯಿಂದ ಬೆಂಕಿ ಕಾಣಿಸಿಕೊಂಡಿದೆ. ಕಂಪನಿಯ ಮಾಲೀಕರು ಪೊಲೀಸರ ವಶದಲ್ಲಿದ್ದಾರೆ. ಬೆಂಕಿ ಅವಘಡದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುವ ಪ್ರಯತ್ನ ನಡೆಯುತ್ತಿದೆ.

ಇದಲ್ಲದೆ, ಒಟ್ಟು 10 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ತಕ್ಷಣದ ವೈದ್ಯಕೀಯ ನೆರವು ನೀಡಲು ಆಂಬ್ಯುಲೆನ್ಸ್ ಸೌಲಭ್ಯವೂ ಸ್ಥಳದಲ್ಲಿ ಲಭ್ಯವಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

English summary
A massive fire broke out on Friday afternoon in a building near Pillar No. 544 of Mundka Metro station in West Delhi. The fire was so intense that it completely engulfed the three-story building.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X