ದೆಹಲಿ: 14 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆ ಸಾಧ್ಯತೆ
ನವದೆಹಲಿ, ಜನವರಿ 06: ದೆಹಲಿಯಲ್ಲಿ ಜನವರಿ 06 ರಂದು 14 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದ್ದಾರೆ. ಒಂದೇ ದಿನದಲ್ಲಿ ಕಳೆದ ಎಂಟು ತಿಂಗಳಲ್ಲೇ ಅಧಿಕ ಪ್ರಕರಣಗಳು ದೆಹಲಿಯಲ್ಲಿ ಪತ್ತೆಯಾಗಿವೆ. ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಇಂದು 14 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಲಿದೆ ಎಂದು ಹೇಳಿದ್ದಾರೆ.
ಬುಧವಾರ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿತ್ತು, 5481ರಿಂದ 10,665ಕ್ಕೆ ಏರಿಕೆಯಾಗಿತ್ತು, ಜೂನ್ 26ರ ನಂತರ ಕಾಣಿಸಿಕೊಂಡ ಅಧಿಕ ಪ್ರಕರಣ ಇದಾಗಿದೆ.
ದೇಶಾದ್ಯಂತ ವೇಗವಾಗಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ನಡುವೆ, ದೆಹಲಿಯಲ್ಲಿ ಸೋಂಕಿನ ವೇಗವನ್ನು ತಡೆಯಲು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ವೇಗವಾಗಿ ಹೆಚ್ಚುತ್ತಿರುವ ಪ್ರಕರಣಗಳನ್ನು ನಿಯಂತ್ರಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸೋಂಕಿನ ಅನಿಯಂತ್ರಿತ ವೇಗಕ್ಕೆ ಸಂಬಂಧಿಸಿದಂತೆ ಇಂದು ನಡೆದ ಡಿಡಿಎಂಎ ಸಭೆಯಲ್ಲಿ, ದೆಹಲಿಯಲ್ಲಿ ಮತ್ತೊಮ್ಮೆ ವಾರಾಂತ್ಯ ಕರ್ಫ್ಯೂ ವಿಧಿಸಲು ನಿರ್ಧರಿಸಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಶೇ 50ರಷ್ಟು ಸಾಮರ್ಥ್ಯದಲ್ಲಿ ಕೆಲಸ:
ಕೊರೊನಾವೈರಸ್ ಹೊಸ ರೂಪಾಂತರ ಓಮಿಕ್ರಾನ್ ಶರವೇಗದಲ್ಲಿ ಹರಡುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ಖಾಸಗಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಶೇ 50ರಷ್ಟು ಸಾಮರ್ಥ್ಯದಲ್ಲಿ ಕೆಲಸ ಮಾಡುವಂತೆ ಸೂಚಿಸಲಾಗಿದೆ.

ಅದೇ ರೀತಿ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ದೆಹಲಿಯಲ್ಲಿ ಅಗತ್ಯ ಸೇವೆಗಳನ್ನು ಮುಂದುವರಿಸಲಾಗುವುದು ಎಂದು ಹೇಳಲಾಗಿದೆ. ಇನ್ನು ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಧಿಕೃತ ಆದೇಶ ಮತ್ತು ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಕೊರೊನಾ ಆತಂಕಕಾರಿ ಪರಿಸ್ಥಿತಿಯ ನಡುವೆ, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಪತ್ರಿಕಾಗೋಷ್ಠಿ ನಡೆಸುವ ಮೂಲಕ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ದೆಹಲಿ ಸೇರಿದಂತೆ ಇಡೀ ದೇಶದಲ್ಲಿ ಓಮಿಕ್ರಾನ್ ಗ್ರಾಫ್ ನಿರಂತರವಾಗಿ ಹೆಚ್ಚುತ್ತಿದೆ. ಓಮಿಕ್ರಾನ್ ಹೆಚ್ಚು ಹಾನಿ ಮಾಡದಿದ್ದರೂ, ಸದ್ಯಕ್ಕೆ ಇಡೀ ವಿಶ್ವದಲ್ಲಿ ಅದೇ ಟ್ರೆಂಡ್ ಅನ್ನು ದೆಹಲಿಯಲ್ಲೂ ತೋರಿಸುತ್ತಿದೆ.
>> ಶನಿವಾರ ಮತ್ತು ಭಾನುವಾರ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಇರುತ್ತದೆ.
>> ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ 50% ಉದ್ಯೋಗಿಗಳೊಂದಿಗೆ ಕರ್ತವ್ಯ ನಿರ್ವಹಿಸಲು ಸೂಚನೆ
>> ಅಗತ್ಯ ಸೇವೆಗಳ ಕಚೇರಿಗಳು ತೆರೆದಿರುತ್ತವೆ.
>> ಖಾಸಗಿ ಕಚೇರಿಗಳು 50 ಪ್ರತಿಶತ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತವೆ. ಉಳಿದವರು ಮನೆಯಿಂದ ಅಥವಾ ಆನ್‌ಲೈನ್‌ನಲ್ಲಿ ಕೆಲಸ ಮಾಡುತ್ತಾರೆ.
ದೇಶದಲ್ಲಿ ವೇಗವಾಗಿ ಹೆಚ್ಚುತ್ತಿರುವ ರೂಪಾಂತರಿ ಒಮಿಕ್ರಾನ್, ಇದನ್ನು ಡೆಲ್ಟಾ ಅಥವಾ ಡೆಲ್ಟಾ ಪ್ಲಸ್‌ನಂತೆ ಮಾರಣಾಂತಿಕವೆಂದು ಪರಿಗಣಿಸಲಾಗುವುದಿಲ್ಲಾವಾದರೂ ಇದರ ಪಸರಿಸುವಿಕೆಯ ತೀವ್ರತೆ ಹೆಚ್ಚೇ ಆಗಿದೆ.
ದೆಹಲಿ ಮುಖ್ಯಮಂತ್ರಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರೇ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಇತ್ತೀಚಿಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕ್ವಾರಂಟೈನ್ ನಲ್ಲಿರುವಂತೆಯೂ ಮತ್ತು ಕೊರೊನಾ ಪರೀಕ್ಷೆಗೆ ಒಳಪಡುವಂತೆ ಹೇಳಿದ್ದರು.
ಈ ಕುರಿತಂತೆ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 'ನಾನು ಕೋವಿಡ್ ಪಾಸಿಟಿವ್ ಆಗಿದ್ದೇನೆ. ಸೌಮ್ಯವಾದ ರೋಗಲಕ್ಷಣಗಳಿವೆ. ಮನೆಯಲ್ಲಿ ನನ್ನನ್ನು ನಾನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು, ದಯವಿಟ್ಟು ನಿಮ್ಮನ್ನು ಪ್ರತ್ಯೇಕಿಸಿ ಮತ್ತು ನಿಮ್ಮನ್ನು ಪರೀಕ್ಷಿಸಿಕೊಳ್ಳಿ' ಎಂದಿದ್ದರು.












Click it and Unblock the Notifications