ಬೆಳ್ಳಂಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ ಆರಂಭ

ನವದೆಹಲಿ, ಫೆಬ್ರವರಿ.08: ರಾಷ್ಟ್ರ ರಾಜಧಾನಿಯ ಮೆಟ್ರೋ ಪ್ರಯಾಣಿಕರಿಗೆ ದೆಹಲಿ ಮೆಟ್ರೋ ರೈಲು ಕಾರ್ಪೋರೇಷನ್ ಸಿಹಿಸುದ್ದಿ ನೀಡಿದೆ. ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಮತ್ತು ಮತದಾರರಿಗೆ ಅನುಕೂಲವಾಗುವಂತಾ ಕ್ರಮವನ್ನು ಜಾರಿಗೊಳಿಸಿದ್ದಾರೆ.

ಫೆಬ್ರವರಿ.08ರಂದು ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಂದು ಬೆಳ್ಳಂಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ದೆಹಲಿಯ ಮೆಟ್ರೋ ಕಾರ್ಪೋರೇಷನ್ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ಸೂಕ್ತ ಸಮಯಕ್ಕೆ ನಿಗದಿತ ಪ್ರದೇಶಕ್ಕೆ ತೆರಳಲು ಇದರಿಂದ ಅನುಕೂಲವಾಗಲಿದೆ. ಇದರ ಜೊತೆಗೆ ಮತದಾರರಿಗೂ ಮೆಟ್ರೋ ಸೇವೆ ಹೆಚ್ಚು ಸಹಾಯಕವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Delhi Metro Services Will Begin At 4:00 Am

ಫೆಬ್ರವರಿ.08ರಂದು ಮತದಾನ ಪ್ರಕ್ರಿಯೆ:

ಮುಂಬರುವ ಫೆಬ್ರವರಿ.08ರ ಶನಿವಾರ ದೆಹಲಿ ವಿಧಾನಸಭೆಯ 70 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಸುರಕ್ಷತೆ ದೃಷ್ಟಿಯಿಂದ ಪೊಲೀಸರು ಈಗಾಗಲೇ ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಮತದಾನ ಪ್ರಕ್ರಿಯೆ ದಿನ ಎಲ್ಲ ಕೇಂದ್ರಗಳಲ್ಲೂ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಇದರ ಮಧ್ಯೆ ಸಾರ್ವಜನಿಕರಿಗೆ ಅನುಕೂಲವಾಗಲು ಮೆಟ್ರೋ ತೆಗೆದುಕೊಂಡಿರುವ ಕ್ರಮ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+